ಉಡುಪಿ, ಅ.16: ಉಡುಪಿ ಪೊಲೀಸ್ ಇಲಾಖೆಯಲ್ಲಿ 30 ಹುದ್ದೆಗಳು ತೆರವಾಗಲಿದ್ದು, ಈ ಹಿನ್ನೆಲೆಯಲ್ಲಿ ಇನ್ನೂ 30 ಜನ ಗೃಹ ರಕ್ಷಕರನ್ನು ಇಲಾಖೆಗೆ ನಿಯೋಜಿಸುವುದಕ್ಕೆ ಅವಕಾಶವಿದೆ. ಆದುದರಿಂದ 30 ಮಂದಿ ಗೃಹರಕ್ಷಕರನ್ನು ಪೊಲೀಸ್ ಇಲಾಖೆಗೆ ನಿಯೋಜಿಸಲು ಅಗತ್ಯ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ಉಡುಪಿ ಜಿಲ್ಲಾ ಅಧೀಕ್ಷಕ ಹರಿರಾಂ ಶಂಕರ್ ಹೇಳಿದ್ದಾರೆ.

ಉಡುಪಿ ಜಿಲ್ಲಾ ಗೃಹರಕ್ಷಕದಳದ ವತಿಯಿಂದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪಶ್ಚಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಅವರು ಗೌರವ ರಕ್ಷೆ ಸ್ವೀಕರಿಸಿ ಮಾತನಾಡುತಿದ್ದರು.

ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್ ಇಲಾಖೆಯಂತೆಯೇ ಗೃಹರಕ್ಷಕರು ಕೂಡ ಕರ್ತವ್ಯ ನಿರ್ವ ಹಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಅಕ್ಕ ಪಡೆ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು ಜನರಿಂದ ಮೆಚ್ಚುಗೆ ಪಡೆದಿದೆ. ಗೃಹರಕಕ್ಷಕರು ತಮ್ಮ ಮಾನಸಿಕ ಆರೋಗ್ಯ ಹಾಗೂ ದೈಹಿಕ ಸಾಮರ್ಥ್ಯವನ್ನು ವೃದ್ದಿಸಿಕೊ ಳ್ಳಲು ಕ್ರೀಡೆ ಸಹಾಯ ಮಾಡುತ್ತದೆ ಎಂದು ಅವರು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಗೃಹರಕ್ಷಕದಳದ ಸಮಾದೇಷ್ಟ ಡಾ.ರೋಶನ್ ಕುಮಾರ್ ಶೆಟ್ಟಿ ಮಾತನಾಡಿ, ಕ್ರೀಡಾಕೂಟದಿಂದ ಸ್ನೇಹ ಬಾಂಧವ್ಯ ಹೊಂದಲು ಸಾಧ್ಯ. ಒತ್ತಡದ ನಡುವೆ ಕಾರ್ಯ ನಿರ್ವಹಿಸುವ ಗೃಹ ರಕ್ಷಕರು ಚೇತೋ ಹಾರಿ ಯಾಗಿ ಕಾರ್ಯನಿರ್ವಹಿಸಲು ಕ್ರೀಡಾಕೂಟ ಸಹಕಾರಿ ಎಂದು ಹೇಳಿದರು.

ಕ್ರೀಡಾಕೂಟದಲ್ಲಿ ವಿಜೇತರಾದ ಸ್ಪರ್ಧಾಳುಗಳಿಗೆ ಈ ಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು. ಉದ್ಯಮಿ ಸಂಪತ್ ಶೆಟ್ಟಿ, ಅಜಯ್ ಪಿ.ಶೆಟ್ಟಿ, ಚಿಕ್ಕಮಗಳೂರು ಜಿಲ್ಲೆಯ ಗೃಹರಕ್ಷಕ ದಳದ ಸಮಾದೇಷ್ಟೆ ನಸೀಮ್ ತಾಜ್ ಮಾತನಾಡಿದರು. ಉಡುಪಿ ಜಿಲ್ಲೆ ಗೃಹರಕ್ಷಕ ದಳದ ಸೆಕೆಂಡ್ ಇನ್ ಕಮಾಂಡ್ ರಾಜೇಶ್ ಕೆ.ಸಿ. ಸ್ವಾಗತಿಸಿದರು. ಬ್ರಹ್ಮಾವರ ಪಿಎಲ್‌ಸಿ ಘಟಕ್ ಸ್ಟೀವನ್ ಪ್ರಕಾಸ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor