ಉಡುಪಿ, ಅ.29: ಕರ್ನಾಟಕ ಸರಕಾರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ರಿಝ್ವಾನ್ ಅರ್ಷದ್ ಅವರು ಅಕ್ಟೋಬರ್ 31ರಿಂದ ನವೆಂಬರ್ 2ರವರೆಗೆ ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಅ.31ರ ಶನಿವಾರ ಸಂಜೆ 6:45ಕ್ಕೆ ಬೆಂಗಳೂರಿನಿಂದ ಉಡುಪಿಗೆ ಆಗಮಿಸಲಿರುವ ಸಚಿವರು ಅಂದು ಸಂಜೆ 7:00 ಗಂಟೆಗೆ ಮಿಷನ್ ಕಾಂಪೌಂಡ್‌ನ ಯು.ಬಿ.ಎಂ.ಸಿ ಆಡಿಟೋರಿಯಂನಲ್ಲಿ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ವತಿಯಿಂದ ಏರ್ಪಡಿಸಲಾಗಿರುವ ಸ್ನೇಹ ಸಮಾವೇಶ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ನವೆಂಬರ್ 1ರಂದು ಬೆಳಗ್ಗೆ 9 ಗಂಟೆಗೆ ಅಜ್ಜರಕಾಡು ಮಹತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವ ಸಂದೇಶ ನೀಡಲಿದ್ದಾರೆ. 11:30ಕ್ಕೆ ಬ್ರಹ್ಮಗಿರಿ ಆದರ್ಶ್ ಕಾಂಪ್ಲೆಕ್ಸ್‌ನಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ನವೀಕೃತ ಕಾರ್ಯಾಲಯದ ಉದ್ಘಾಟನೆ, ಅಪರಾಹ್ನ 12:30ಕ್ಕೆ ಬಡಗಬೆಟ್ಟು ಕೊರಂಗ್ರಪಾಡಿಯಲ್ಲಿ ಗ್ರೀನ್ ಟೈಗರ್ ಮೊಬಿಲಿಟಿ ಇವರ ಹೊಸ ಇ.ವಿ. ರಿಟ್ರೋಫಿಟ್ಟಿಂಗ್ ಸೆಂಟರ್ ಉದ್ಘಾಟನೆ, 1:00 ಗಂಟೆಗೆ ಹಲ್ಲುವಳ್ಳಿ- ಕರ್ಜೆ ಸುಗ್ಗಿ ಸುಧಾಕರ್ ಶೆಟ್ಟಿ ಮನೆಗೆ ಭೇಟಿ, 3:00 ಗಂಟೆಗೆ ಸೂರಾಲು ಅರಮನೆಗೆ ಭೇಟಿ, 3:45ಕ್ಕೆ ಬಾರಕೂರು ಕೋಟೆ, ಪಂಚಲಿಂಗೇಶ್ವರ ದೇವಸ್ಥಾನ, ಮಾಲಿಕ ದಿನಾರ್ ಮಸೀದಿ ಹಾಗೂ ಸೇಂಟ್ ಪೀಟರ್ ಚರ್ಚ್‌ಗೆ ಭೇಟಿ ನೀಡಿ ನಂತರ ಉಡುಪಿಯಲ್ಲಿ ವಾಸ್ತವ್ಯ ಮಾಡಲಿದ್ದಾರೆ.

ನವೆಂಬರ್ 2ರಂದು ಬೆಳಗ್ಗೆ 9:30ಕ್ಕೆ ಮುಳೂರ್ ಅಲ್ ಇಶಾನ್ ಸ್ಕೂಲ್ ಕ್ಯಾಂಪಸ್‌ನಲ್ಲಿ ನಡೆಯುವ ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್‌ನ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 10:00 ಗಂಟೆಗೆ ಮಣಿಪಾಲ ಜ್ಞಾನಸುಧಾ ಕಾಲೇಜಿನಲ್ಲಿ ಯುವ ಸಂಸತ್ತು ಕಾರ್ಯಕ್ರಮದ ಉದ್ಘಾಟನೆ, 11:00 ಗಂಟೆಗೆ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ, ಅಪರಾಹ್ನ 2:30ಕ್ಕೆ ಜಿಲ್ಲಾ ಯೋಜನಾ ಸಮಿತಿ ಸಭೆಯಲ್ಲಿ ಭಾಗವಹಿಸಿ ಸಂಜೆ 4 ಗಂಟೆಗೆ ಉಡುಪಿ ಯಿಂದ ಮಂಗಳೂರು ಮೂಲಕ ವಿಮಾನದಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor