ಆ.31ರಂದು ಕೊಂಕಣಿ ಯುವ ಸಂಭ್ರಮ ‘ಕನಾಪ-2025’
Update: 2025-08-29 19:53 IST
ಉಡುಪಿ, ಆ.29: ಕೊಂಕಣಿ ಸಾಹಿತ್ಯ ಕಲಾ ಹಾಗೂ ಸಾಂಸ್ಕೃತಿಕ ಸಂಘಟನೆ ಉಡುಪಿ ಜಿಲ್ಲೆ ಹಾಗೂ ಉಡುಪಿ ಧರ್ಮಪ್ರಾಂತ್ಯದ ಯುವ ಆಯೋಗದ ಸಹಯೋಗದಲ್ಲಿ ಕೊಂಕಣಿ ಮಾನ್ಯತಾ ದಿವಸದ ಪ್ರಯುಕ್ತ ಕೊಂಕಣಿ ಯುವ ಸಂಭ್ರಮ ‘ಕನಾಪ-2025’ ಕವಿತೆ, ನೃತ್ಯ ಹಾಗೂ ಗಾಯನ ಸ್ಪರ್ಧೆ ಆ.31ರಂದು ಮಧ್ಯಾಹ್ನ 2ಗಂಟೆಗೆ ಉಡುಪಿ ಶೋಕಮಾತಾ ಚರ್ಚಿನ ಆವೆ ಮರಿಯ ಸಭಾಂಗಣದಲ್ಲಿ ಜರಗಲಿದೆ.
ಅಧ್ಯಕ್ಷತೆಯನ್ನು ಕೊಂಕಣಿ ಸಾಹಿತ್ಯ ಕಲೆ ಹಾಗೂ ಸಾಂಸ್ಕೃತಿಕ ಸಂಘಟನೆ ಉಡುಪಿ ಜಿಲ್ಲಾಧ್ಯಕ್ಷ ಡಾ.ಫ್ಲಾವಿಯಾ ಕ್ಯಾಸ್ಟಲಿನೊ ವಹಿಸಿಲಿದ್ದು ಮುಖ್ಯ ಅತಿಥಿಗಳಾಗಿ ಉಡುಪಿ ಶೋಕಮಾತಾ ಚರ್ಚಿನ ಪ್ರಧಾನ ಧರ್ಮಗುರು ವಂ.ಚಾರ್ಲ್ಸ್ ಮಿನೇಜಸ್ ಭಾಗವಹಿಸಲಿರುವರು. ಸ್ಪರ್ಧೆಯ ವಿಜೇತ ರಾದವರಿಗೆ ಸಮಾರೋಪ ಸಮಾರಂಭದಲ್ಲಿ ಬಹುಮಾನಗಳ ವಿತರಣೆ ನಡೆಸಲಾಗುವುದು ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.