×
Ad

ಜು.4: ಉಡುಪಿ ಜಿಲ್ಲಾ ನೂತನ ಮಹಿಳಾ ಕಾಂಗ್ರೆಸ್ ಸಮಿತಿ ಪದಗ್ರಹಣ

Update: 2025-07-02 21:34 IST

ಉಡುಪಿ, ಜು.2: ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ನೂತನ ಅಧ್ಯಕ್ಷರ ಹಾಗೂ ಸಮಿತಿಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜು.4ರಂದು ಬೆಳಗ್ಗೆ 10 ಗಂಟೆಗೆ ಉಡುಪಿ ಬನ್ನಂಜೆಯ ಶ್ರೀನಾರಾಯಣ ಗುರು ಸಭಾಭವನದಲ್ಲಿ ನಡೆಯಲಿದೆ ಎಂದು ಅಧ್ಯಕ್ಷರಾಗಿ ಆಯ್ಕೆಯಾಗಿರುವ ಜ್ಯೋತಿ ಕೃಷ್ಣ ಹೆಬ್ಬಾರ್ ತಿಳಿಸಿದ್ದಾರೆ.

ಉಡುಪಿ ಪ್ರೆಸ್‌ಕ್ಲಬ್‌ನಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಮಾರಂಭದಲ್ಲಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಸೌಮ್ಯ ರೆಡ್ಡಿ ಹಾಗೂ ರಾಜ್ಯ ಗ್ಯಾರಂಟಿ ಅನು ಷ್ಠಾನ ಸಮಿತಿ ಉಪಾಧ್ಯಕ್ಷೆ ಡಾ.ಪುಷ್ಪ ಅಮರನಾಥ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

ಇವರೊಂದಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ, ಅಶೋಕ ಕುಮಾರ್ ಕೊಡವೂರು, ಕೆಪಿಸಿಸಿ ಕಾರ್ಯಾಧ್ಯಕ್ಷ ಡಾ.ಮಂಜುನಾಥ ಭಂಡಾರಿ, ವಿಧಾನಪರಿಷತ್ ಸದಸ್ಯ ಐವಾನ್ ಡಿಸೋಜ, ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ, ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ, ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ನಾಯಕರಾದ ಎಂ.ಎ.ಗಫೂರ್, ಪ್ರಸಾದ್‌ರಾಜ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ, ಉದಯಶೆಟ್ಟಿ ಮುನಿಯಾಲು, ರಮೇಶ್ ಕಾಂಚನ್ ಮುಂತಾದವರು ಭಾಗವಹಿಸಲಿ ದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಹಾಲಿ ಅಧ್ಯಕ್ಷೆ ಗೀತಾ ವಾಗ್ಳೆ, ಮಹಿಳಾ ಕಾಂಗ್ರೆಸ್ ನಾಯಕಿಯರಾದ ವೆರೋನಿಕಾ ಕರ್ನೇಲಿಯೊ, ಭಾನು ಭಾಸ್ಕರ್, ಚಂದ್ರಿಕಾ ಶೆಟ್ಟಿ, ಮೀನಾಕ್ಷಿ ಮಾಧವ ಬನ್ನಂಜೆ, ಸಂಧ್ಯಾ ತಿಲಕ್‌ರಾಜ್, ಪುಷ್ಪ ಆಂಚನ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News