ಜು.4ರಂದು ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ ಕಾರ್ಯಕ್ರಮ
ಉಡುಪಿ: ಯಕ್ಷಗಾನ ಕಲಾರಂಗ ವಿದ್ವಾಂಸರಿಗೆ ನೀಡುವ ತಲ್ಲೂರು ಕನಕಾ ಅಣ್ಣಯ್ಯ ಶೆಟ್ಟಿ ಸ್ಮರಣಾರ್ಥ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ ಪ್ರದಾನ ಸಮಾರಂಭ ಜು.4ರಂದು ಸಂಜೆ 4 ಗಂಟೆಗೆ ಸಂಸ್ಥೆಯ ಐವೈಸಿ ಸಭಾಭವನ ದಲ್ಲಿ ನಡೆಯಲಿದೆ.
ಬಹುಭಾಷಾ ವಿದ್ವಾಂಸರಾದ ಶತಾವಧಾನಿ ಡಾ.ಆರ್. ಗಣೇಶ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಹಿರಿಯ ವಿದ್ವಾಂಸರು, ಚಿಂತಕರು ಆದ ಲಕ್ಷ್ಮೀಶ ತೋಳ್ಪಾಡಿ ಅಧ್ಯಕ್ಷತೆ ವಹಿಸಲಿದ್ದು, ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಅವಧಾನಿ ವಿದ್ವಾನ್ ಗುಂಡಿಬೈಲ್ ಸುಬ್ರಹ್ಮಣ್ಯ ಭಟ್ ಅಭಿನಂದನಾ ಭಾಷಣ ಮಾಡಲಿದ್ದಾರೆ. ತಲ್ಲೂರು ಫ್ಯಾಮಿಲಿ ಟ್ರಸ್ಟ್‌ನ ವಿಶ್ವಸ್ಥರಾದ ಗಿರಿಜಾ ಶಿವರಾಮ ಶೆಟ್ಟಿ ಉಪಸ್ಥಿತರಿರುವರು.
ಇದೇ ಸಂದರ್ಭದಲ್ಲಿ ಯಕ್ಷಗಾನದ ಯುವ ಕಲಾವಿದರಿಗೆ ಆಯೋಜಿಸಲಾಗಿದ್ದ ನಾಲ್ಕು ದಿನಗಳ ಸನಿವಾಸ ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪ ಸಮಾರಂಭವೂ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.