×
Ad

ನ.4ರಂದು ಬೈಲೂರಿನಲ್ಲಿ ಸೈಬರ್ ಕ್ರೈಂ ಮಾಹಿತಿ ಶಿಬಿರ

Update: 2023-11-02 11:32 IST

ಕಾರ್ಕಳ, ನ.2: ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಇದರ ರಜತ ಮಹೋತ್ಸವದ ಅಂಗವಾಗಿ ಲಯನ್ಸ್ ಕ್ಲಬ್ ನೀರೆ ಬೈಲೂರು ಮತ್ತು ಧ್ವನಿ ಬೆಳಕು ಸಂಯೋಜಕರ ಸಂಘಟನೆ ಕಾರ್ಕಳ ಇವರ ಸಹಯೋಗದೊಂದಿಗೆ ನ.4ರಂದು ಬೈಲೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಹಾಲ್ಡಿನ್ ಗ್ಲಾಸ್ ಹಾಲ್ ನಲ್ಲಿ ಸೈಬರ್ ಕ್ರೈಂ ಮಾಹಿತಿ ಶಿಬಿರ ಆಯೋಜಿಸಲಾಗಿದೆ.

 ಮಾಹಿತಿ ಶಿಬಿರವನ್ನು ಉಡುಪಿ ಜಿಲ್ಲಾ ಎಸ್ಪಿ ಡಾ. ಅರುಣ್.ಕೆ ಉದ್ಘಾಟಿಸುವರು. ಜಿಲ್ಲಾ ರಜತ ಮಹೋತ್ಸವ ಸಮಿತಿ ಸಂಚಾಲಕ, ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮುಹಮ್ಮದ್ ಶರೀಫ್ ಅಧ್ಯಕ್ಷತೆ ವಹಿಸುವರು.

ರಾಜ್ಯ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ, ರಮೇಶ್ ಕುಟ್ಟಪ್ಪ. ಜೆ, ಉದ್ಯಮಿಗಳಾದ ಸುಧೀರ್ ಹೆಗ್ಡೆ ಬೈಲೂರು, ಸಂತೋಷ್ ವಾಗ್ಳೆ, ಲಯನ್ಸ್ ಗವರ್ನರ್ ಡಾ.ನೇರಿ ಕರ್ನಾಲಿಯೋ, ಲಯನ್ಸ್ ಕ್ಲಬ್ ನೀರೆ-ಬೈಲೂರು ಅಧ್ಯಕ್ಷ ಕೆ.ಸುಜಯ್ ಜತ್ತನ್ನ, ಧ್ವನಿ ಬೆಳಕು ಸಂಯೋಜಕರ ಸಂಘಟನೆ ಜಿಲ್ಲಾಧ್ಯಕ್ಷ ಕೆ. ಧರ್ಮರಾಜ್ ಕುಮಾರ್, ಸ.ಪ.ಪೂ. ಕಾಲೇಜಿನ ಪ್ರಾಂಶುಪಾಲ ಗುರುಮೂರ್ತಿ ಟಿ., ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷೆ ಮಾಲಿನಿ ಜೆ. ಶೆಟ್ಟಿ, ಕಾರ್ಕಳ ನಗರ ಠಾಣೆಯ ಪೊಲೀಸ್ ಉಪನಿರೀಕ್ಷಕ ಸಂದೀಪ್ ಶೆಟ್ಟಿ ಉಪಸ್ಥಿತರಿರುವರು.

ಉಡುಪಿ ಸೆನ್ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಅಶೋಕ್ ಕುಮಾರ್, ಮಣಿಪಾಲ ಠಾಣಾಧಿಕಾರಿ ದೇವರಾಜ್ ಟಿ.ವಿ. ಸಂಪನ್ಮೂಲ ವ್ಯಕ್ತಿಗಳಾಗಿ ಸೈಬರ್ ಕ್ರೈಂ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News