ನ.6: ಮೀಫ್ ವತಿಯಿಂದ ಉಡುಪಿ ಜಿಲ್ಲಾ ಮುಸ್ಲಿಂ ವಿದ್ಯಾ ಸಂಸ್ಥೆಗಳ ಸಭೆ
ಉಡುಪಿ, ನ.1: ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ವತಿಯಿಂದ ಜಿಲ್ಲಾ ವ್ಯಾಪ್ತಿಯಲ್ಲಿರುವ ಎಲ್ಲಾ ಮುಸ್ಲಿಂ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಗಳ ಸಭೆಯು ನ.6ರಂದು ಬೆಳಗ್ಗೆ 9.30ಕ್ಕೆ ಉಡುಪಿ ಜಾಮಿಯಾ ಮಸೀದಿಯ ಸಭಾಂಗಣದಲ್ಲಿ ಜರಗಲಿದೆ.
ಮುಸ್ಲಿಂ ವಿದ್ಯಾ ಸಂಸ್ಥೆಗಳು ಎದುರಿಸುತ್ತಿರುವ ಸವಾಲುಗಳು, ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ವನ್ನು ಹೆಚ್ಚಿಸುವ ಕ್ರಮಗಳು ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಅವಕಾಶಗಳನ್ನು ಕಲ್ಪಿಸುವ ಕುರಿತು ಸಮಾಲೋಚನೆ ನಡೆಸುವ ಉದ್ದೇಶದಿಂದ ಸಭೆ ನಡೆಯಲಿದೆ.
ಅಲ್ಲದೆ ಎಲ್ಲಾ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಮೀಫ್ ಉಡುಪಿ ಘಟಕವನ್ನು ಅಂದು ರಚಿಸಲಾಗುವುದು. ಮೀಫ್ ಕೇಂದ್ರ ಸಮಿತಿಯ ಆಶ್ರಯದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಮುಸ್ಲಿಂ ವಿದ್ಯಾ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸುವಂತೆ ಮೀಫ್ ಕೇಂದ್ರ ಸಮಿತಿಯ ಅಧ್ಯಕ್ಷ ಮೂಸಬ್ಬ ಪಿ. ಬ್ಯಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.