ಎ.7ರಂದು ವಿಶ್ವ ಆರೋಗ್ಯ ದಿನಾಚರಣೆ
Update: 2025-04-04 20:31 IST
ಉಡುಪಿ, ಎ.4: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಸರ್ವೇಕ್ಷಣಾ ಘಟಕ ಎನ್.ಸಿ.ಡಿ ಘಟಕ, ಜಿಲ್ಲಾ ಆಸ್ಪತ್ರೆ ಎನ್.ಸಿ.ಡಿ ವಿಭಾಗ, ಬಡಗುಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ, ಕ್ರಿಶ್ಚಿಯನ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಉಡುಪಿ ಹಾಗೂ ಎ.ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಮಂಗಳೂರು ಇವರ ಸಹಯೋಗದಲ್ಲಿ ಎ.7ರಂದು ಬೆಳಗ್ಗೆ 10 ಗಂಟೆಗೆ ನಗರದ ಕ್ರಿಶ್ಚಿಯನ್ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನಲ್ಲಿ ವಿಶ್ವ ಆರೋಗ್ಯ ದಿನಾಚರಣೆ ಮತ್ತು ಮಾಹಿತಿ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕ ಅರಿವು ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಸ್ಪತ್ರೆ ಯ ಜಿಲ್ಲಾ ಸರ್ಜನ್‌ರ ಪ್ರಕಟಣೆ ತಿಳಿಸಿದೆ.