ಅ.9ಕ್ಕೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಉಡುಪಿಗೆ ಭೇಟಿ
Update: 2025-10-06 22:07 IST
ಉಡುಪಿ, ಅ.6: ರಾಜ್ಯದ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಅವರು ಅ.9 ಮತ್ತು 10ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಅ.9ರ ಗುರುವಾರ ರಾತ್ರಿ ಉಡುಪಿಗೆ ಆಗಮಿಸಿ ವಾಸ್ತವ್ಯ ಮಾಡುವ ಸಚಿವರು ಮರುದಿನ ಬೆಳಗ್ಗೆ 9:30ಕ್ಕೆ ಉಡುಪಿಯ ಪ್ರವಾಸಿ ಮಂದಿರದಲ್ಲಿ ಜಿಲ್ಲೆಯ ಶಾಸಕರು, ಜಿಲ್ಲಾಧಿಕಾರಿ, ಜಿಪಂನ ಸಿಇಓ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ಬಳಿಕ 10 ಗಂಟೆಗೆ ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡುವರು.
ಬಳಿಕ ಅವರು 11 ಗಂಟೆಗೆ ಅಜ್ಜರಕಾಡಿನಲ್ಲಿರುವ ಪುರಭವನದಲ್ಲಿ ಉಡುಪಿ ಜಿಲ್ಲೆಯ ವಿವಿಧ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ದಲ್ಲಿ ಭಾಗವಹಿಸಲಿದ್ದಾರೆ. ನಂತರ ಸಚಿವರು ಅಪರಾಹ್ನ 1:30ಕ್ಕೆ ಉಡುಪಿಯಿಂದ ಮಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.