ಸೆ.9ರಂದು ತಾಲೂಕು ಮಟ್ಟದ ಪ್ರಜಾಸೇವೆ ಆಂದೋಲನ ಸಭೆ
ಉಡುಪಿ, ಸೆ.3: ಸಾರ್ವಜನಿಕರ ಅಹವಾಲುಗಳನ್ನು ಹಾಗೂ ಕುಂದು ಕೊರತೆಗಳನ್ನು ಒಂದೇ ಸೂರಿನಡಿ ತ್ವರಿತವಾಗಿ ವಿಲೇವಾರಿ ಮಾಡಲು ಪ್ರಜಾಸೇವಾ ಇಲಾಖೆಯ ಅಡಿಯಲ್ಲಿ ಉಡುಪಿ ಜಿಲ್ಲೆಯ ತಾಲೂಕು ಹಾಗೂ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆಯನ್ನು ಮುಂದೂಡಲಾಗಿದೆ.
ರಾಜ್ಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಅಧ್ಯಕ್ಷತೆಯಲ್ಲಿ ಕಾರ್ಕಳ ಮಂಜುನಾಥ ಪೈ ಸಭಾಭವನದಲ್ಲಿ ಸೆ.5ರಂದು ಸಭೆ ನಿಗದಿ ಯಾಗಿತ್ತು. ಆದರೆ ಉಡುಪಿ ಜಿಲ್ಲೆಯಲ್ಲಿ ಆ ದಿನದಂದು ಶ್ರೀಕೃಪ್ಣ ಜನ್ಮಾಷ್ಠಮಿ ನಿಮಿತ್ತ ಮೊಸರು ಕುಡಿಕೆ ಹೊಡೆಯುವ ಕಾರ್ಯಕ್ರಮ ಇರುವುದರಿಂದ ಸೆ.9ರಂದು ಬೆಳಗ್ಗೆ 10.30ಕ್ಕೆ ಪ್ರಜಾಸೇವೆ ಆಂದೋಲನ ಸಭೆ ಮಣಿಪಾಲ ರಜತಾ ದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರ ಉಪಸ್ಥಿತಿಯಲ್ಲಿ ನಡೆಯಲಿದೆ.
ಆದುದರಿಂದ ಸಾರ್ವಜನಿಕರು ಈ ಸಭೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ಅಹವಾಲುಗಳು ಸೇರಿ ದಂತೆ ಸರಕಾರದ ವಿವಿಧ ಯೋಜನೆಗಳ ಸವಲತ್ತು ಪಡೆಯಲು ಅರ್ಜಿ ಸಲ್ಲಿಸಿ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳಬೇಕು. ಅದರಂತೆ ಜಿಲ್ಲೆಯ ಉಳಿದ ಇತರೆ ತಾಲೂಕಿನ ಹೋಬಳಿ ಗಳಲ್ಲಿ ನಿಗದಿಪಡಿಸಲಾಗಿದ್ದ ಪ್ರಜಾಸೇವೆ ಆಂದೋಲನಾ ಸಭೆಗಳನ್ನು ಸೆ.12ರಂದು ನಿಗದಿಪಡಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.