ಉಡುಪಿ, ಸೆ.7: ಜಿಲ್ಲೆಯ ಜನತೆಯ ಅಹವಾಲುಗಳನ್ನು ಆಲಿಸಿ ಮನೆ ಬಾಗಿಲಿನಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ನೀಡಲು ತಾಲೂಕು ಮಟ್ಟದ ಪ್ರಜಾಸೇವೆ ಆಂದೋಲನ ಸಭೆ ಸೆ.9ರ ಬುಧವಾರ ಬೆಳಗ್ಗೆ 10:30ಕ್ಕೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇು ಸಭಾಂಗಣದಲ್ಲಿ ನಡೆಯಲಿದೆ.

ರಾಜ್ಯ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ ಅಧ್ಯಕ್ಷತೆಯಲ್ಲಿ ಹಾಗೂ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತಿಯಲ್ಲಿ ಸಭೆ ನಡೆಯಲಿದೆ. ಹೋಬಳಿ ಮಟ್ಟದ ಸಭೆ ಸೆ.12ರಂದು ನಡೆಯಲಿದೆ.

ಸಾರ್ವಜನಿಕರು ಈ ಸಭೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ಅಹವಾಲುಗಳು ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಸವಲತ್ತು ಪಡೆಯಲು ಅರ್ಜಿ ಸಲ್ಲಿಸಿ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor