ಸಾಲಿಗ್ರಾಮ ಕಯಾಕಿಂಗ್ ತಂಡದಿಂದ ರಾಷ್ಟ್ರಪ್ರೇಮ ಬೆಳೆಸುವ ವಿಭಿನ್ನ ಪ್ರಯತ್ನ
Update: 2023-08-15 20:35 IST
ಕುಂದಾಪುರ, ಆ.15: 77ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆ ಯಲ್ಲಿ ಸಾಲಿಗ್ರಾಮ ಕಯಾಕಿಂಗ್ ತಂಡ ವಿಭಿನ್ನ ವಾಗಿ ರಾಷ್ಟ್ರಪ್ರೇಮವನ್ನು ಮೆರೆಯುವ ಪ್ರಯತ್ನ ಮಾಡಿದೆ.
ಸೀತಾ ನದಿಯಲ್ಲಿ ಕಯಕಿಂಗ್ ಮೂಲಕ ಪ್ರಕೃತಿ ವಿಸ್ಮಯಗಳನ್ನು ತೋರಿಸಿ ಜನರಲ್ಲಿ ಪ್ರಕೃತಿ ಪ್ರೇಮ ಬೆಳೆಸುವ ಕಾರ್ಯ ಮಾಡುತ್ತಿರುವ ಸಾಲಿಗ್ರಾಮ ಕಯಾಕಿಂಗ್ ತಂಡ ಇದೀಗ ಈ ವಿಭಿನ್ನ ಪ್ರಯತ್ನ ನಡೆಸಿದೆ. ಕಳೆದ ಬಾರಿ ಸೀತಾ ನದಿಯ ಮದ್ಯದಲ್ಲಿ ಕಯಾಕಿಂಗ್ ಮೂಲಕ ತೆರಳಿ ಅಲ್ಲಿ ಧ್ವಜ ಸ್ತಂಭ ನೆಟ್ಟು ಧ್ವಜಾರೋಹಣ ನಡೆಸಿದ ತಂಡ ಈ ಬಾರಿ ನದಿಯ ಮದ್ಯದಲ್ಲಿ ಮರದ ಸೇತುವೆ ರಚಿಸಿ ಧ್ವಜಾರೋಹಣ ಮಾಡಿ ಅನ್ನವಿತ್ತ ಪ್ರಕೃತಿಯಲ್ಲಿ ರಾಷ್ಟ್ರಪ್ರೇಮ ಮೆರೆದಿದೆ.
ನಿವೃತ್ತ ಕರ್ಣಾಟಕ ಬ್ಯಾಂಕ್ ಮ್ಯಾನೇಜರ್ ಚಂದ್ರಶೇಖರ್ ನಾವಡ ಧ್ವಜಾ ರೋಹಣಗೈದರು. ಸಾಲಿಗ್ರಾಮ ಕಯಾಕಿಂಗ್‌ನ ಮುಖ್ಯಸ್ಥರಾದ ಮಿಥುನ್ ಕುಮಾರ್ ಮೆಂಡನ್, ಲೋಕೇಶ್ ಮತ್ತಿತರು ಉಪಸ್ಥಿತರಿದ್ದರು.