ಪ್ರತ್ಯೇಕ ಪ್ರಕರಣ: ವಿದ್ಯಾರ್ಥಿನಿ ಸಹಿತ ನಾಲ್ವರು ಆತ್ಮಹತ್ಯೆ
ಹೆಬ್ರಿ, ನ.20: ಹೆಬ್ರಿ ಎಸ್‌ಆರ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಪೂಜಿತ(17) ಎಂಬವರು ಮಾನಸಿಕ ಖಿನ್ನತೆಗೆ ಒಳಗಾಗಿ ಜೀವನದಲ್ಲಿ ಜಿಗುಪ್ಸೆಗೊಂಡು ನ.20ರಂದು ಮಧ್ಯಾಹ್ನ ಕಾಲೇಜು ಬಳಿ ನಿರ್ಮಾಣ ಹಂತದಲ್ಲಿರುವ ಅವರ ಮನೆಯ ಕೋಣೆಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಟ: ಅನಾರೋಗ್ಯದಿಂದ ಬಳಲುತ್ತಿದ್ದ ಹಾರ್ದಳ್ಳಿ ಮಂಡಳ್ಳಿ ಗ್ರಾಮದ ಸದಾನಂದ(73) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ನ.20ರಂದು ಮನೆಯ ಹತ್ತಿರದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ: ತಲ್ಲೂರು ನಿವಾಸಿ ಸುದರ್ಶನ(29) ಎಂಬವರು ಮಾನಸಿಕ ಖಿನ್ನತೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನ.19ರಂದು ಸಂಜೆ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಜೆಕಾರು: ಹೆಬ್ರಿಯ ಶೀನ ಎಂಬವರ ಮಗ ಗಣೇಶ(23) ಎಂಬವರು ವೈಯಕ್ತಿಕ ಕಾರಣದಿಂದ ಮನನೊಂದು ನ.19ರಂದು ಸಂಜೆ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.