×
Ad

ರೈಲ್ವೆ ಹಳಿ ಮೇಲೆ ಬಿದ್ದ ಮರ: ಲೋಕೊ ಪೈಲಟ್ ಗಳ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

Update: 2024-07-24 14:30 IST

ಉಡುಪಿ, ಜು.24:  ಲೋಕೊ ಪೈಲಟ್ ಗಳ ಸಕಾಲಿಕ ತುರ್ತು ಕ್ರಮದಿಂದ ಇಂದು ಬೆಳಗ್ಗೆ ಮುಂಬಯಿಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಮತ್ಸ್ಯ‌ಗಂಧ ಎಕ್ಸ್‌ಪ್ರೆಸ್ ರೆಲು ದೊಡ್ಡ ದುರಂತದಿಂದ ಪಾರಾದ ಘಟನೆ ಬಾರಕೂರು- ಉಡುಪಿ ನಿಲ್ದಾಣಗಳ ನಡುವೆ ನಡೆದಿರುವ ಬಗ್ಗೆ ವರದಿಯಾಗಿದೆ.

ಕೊಂಕಣ ರೈಲು ಮಾರ್ಗದಲ್ಲಿ ಬಾರಕೂರು ಹಾಗೂ ಉಡುಪಿ ನಿಲ್ದಾಣಗಳ ನಡುವೆ ಬೆಳಗ್ಗೆ 9:18ಕ್ಕೆ ಮಣಿಪಾಲದ ಪೆರಂಪಳ್ಳಿ ಬಳಿ ದೊಡ್ಡ ಮರವೊಂದು ಭಾರೀ ಮಳೆಯಿಂದ ಹಳಿಗೆ ಅಡ್ಡವಾಗಿ ಬಿದ್ದಿರುವುದನ್ನು ರೈಲಿನ ಲೋಕೋಪೈಲಟ್ ಗಳು ತೀರಾ ಸಮೀಪದಲ್ಲಿ ಗಮನಿಸಿದ್ದರು.

ತಕ್ಷಣವೇ ಅವರು ಎಮರ್ಜೆನ್ಸಿ ಬ್ರೇಕ್‌ ಅನ್ನು ಬಳಸಿ ರೈಲನ್ನು ನಿಲ್ಲಿಸುವಲ್ಲಿ ಯಶಸ್ವಿಯಾದರು. ಹಳಿಯಲ್ಲಿ ಬಿದ್ದ ಮರ ಪೈಲಟ್‌ಗಳ ಗಮನಕ್ಕೆ ಬರುವುದು ಸ್ವಲ್ಪ ತಡವಾಗಿದ್ದರೂ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ತಕ್ಷಣವೇ ಸ್ಥಳಕ್ಕೆ ಧಾವಿಸಿ ಬಂದ ಒಎಚ್ಇ ತಂಡದವರು ಮರವನ್ನು ಹಳಿಯಿಂದ ತೆಗೆದು ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಸಕಾಲಿಕ ಕ್ರಮದಿಂದ ದೊಡ್ಡ ಅನಾಹುತ ತಪ್ಪಿಸಿದ ಜಾಗೃತ ಮಂಡ್ಯ ಮತ್ತು ಭಟ್ಕಳದ ಲೋಕೊ ಪೈಲಟ್ ಮತ್ತು ಸಹಾಯಕ ಪೈಲಟ್‌ಗೆ ಕೊಂಕಣ ರೈಲ್ವೆಯ ಸಿಎಂಡಿ ಸಂತೋಷ್ ಕುಮಾರ್ ಝಾ ಅವರು ತಲಾ 15,000ರೂ ಬಹುಮಾನವನ್ನು ಘೋಷಿಸಿದ್ದು, ಸುರತ್ಕಲ್ ನಿಲ್ದಾಣದಲ್ಲಿ ಬಹುಮಾನದ ಚೆಕ್‌ ಅನ್ನು   ಹಸ್ತಾಂತರಿಸಲಾಯಿತು ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News