ಲೋಕಾಯುಕ್ತ ಜನಸಂಪರ್ಕ ಸಭೆ ಮುಂದೂಡಿಕೆ
Update: 2024-08-13 19:58 IST
ಉಡುಪಿ, ಆ.13: ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರ ನೇತೃತ್ವದಲ್ಲಿ ಆ. 14ರಂದು ಕಾಪು ತಾಲೂಕು ಕಚೇರಿಯಲ್ಲಿ ನಿಗದಿಪಡಿಸಿದ್ದ ಸಾರ್ವಜನಿಕ ಅಹವಾಲು ಮತ್ತು ಲೋಕಾಯುಕ್ತ ಜನಸಂಪರ್ಕ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ.
ಮುಂದಿನ ದಿನಾಂಕವನ್ನು ಶೀಘ್ರವೇ ತಿಳಿಸಲಾಗುವುದು ಎಂದು ಲೋಕಾಯುಕ್ತ ಪೊಲೀಸ್ ಉಪ ನಿರೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.