×
Ad

ಉಡುಪಿ ಜಿಲ್ಲಾಡಳಿತದಿಂದ ದಲಿತರ ನಿರ್ಲಕ್ಷ್ಯ ಆರೋಪ: ಉಸ್ತುವಾರಿ ಸಚಿವರಿಗೆ ದಸಂಸ ದೂರು

Update: 2024-08-16 17:52 IST

ಉಡುಪಿ, ಆ.16: ಉಡುಪಿ ಜಿಲ್ಲಾಡಳಿತದ ದಲಿತ ವಿರೋಧಿ ನೀತಿ, ಹನೆಹಳ್ಳಿ ಶೂಟೌಟ್ ಪ್ರಕರಣ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಪೋಲಿಸ್ ಠಾಣೆಗಳಲ್ಲಿ ದಲಿತ ದೌರ್ಜನ್ಯ ಕೇಸುಗಳಿಗೆ ಕೌಂಟರ್ ಕೇಸು ಹಾಕುತ್ತಿರುವ ಬಗ್ಗೆ ದಸಂಸ ಅಂಬೇಡ್ಕರ್ ವಾದ ಉಡುಪಿ ಜಿಲ್ಲಾ ಸಮಿತಿಯು ಆ.15ರಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಭೇಟಿಯಾಗಿ ದೂರು ನೀಡಿ ಚರ್ಚಿಸಿತು.

ಸೆಪ್ಟೆಂಬರ್ ಎರಡನೇ ವಾರದಲ್ಲಿ ದಲಿತರ ಕುಂದುಕೊರತೆಗಳ ಬಗ್ಗೆ ಪ್ರತ್ಯೇಕ ಸಭೆ ನಡೆಸಿ ಸಮಸ್ಯೆ ಬಗೆಹರಿಸುವುದಾಗಿ ಸಚಿವರು ಭರವಸೆ ನೀಡಿದರು. ನಿಯೋಗದಲ್ಲಿ ದಸಂಸ ಜಿಲ್ಲಾ ಪ್ರಧಾನ ಸಂಚಾಲಕ ಸುಂದರ ಮಾಸ್ಟರ್, ಜಿಲ್ಲಾ ಸಂಘಟನಾ ಸಂಚಾಲಕರಾದ ಶ್ಯಾಮರಾಜ್ ಬಿರ್ತಿ, ಮಂಜುನಾಥ ಗಿಳಿಯಾರು, ಶ್ಯಾಮಸುಂದರ್ ತೆಕ್ಕಟ್ಟೆ, ಸುರೇಶ ಹಕ್ಲಾಡಿ, ಶಿವಾನಂದ ಬಿರ್ತಿ, ಗೋಪಾಲ ಕೋಟ ಮೊದಲಾದವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News