×
Ad

ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪ; ಉಡುಪಿ ಪೊಲೀಸರಿಂದ ಸ್ವಯಂ ಪ್ರೇರಿತ ಪ್ರಕರಣ ದಾಖಲು

Update: 2023-11-20 11:24 IST

ಉಡುಪಿ: ನೇಜಾರಿನ ತಾಯಿ, ಮಕ್ಕಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಶಿವಮೊಗ್ಗದ ವ್ಯಕ್ತಿಯ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.

ಹಫೀಝ್ ಮುಹಮ್ಮದ್ ಎಂಬಾತನು ತನ್ನ ಫೇಸ್ಬುಕ್ ಖಾತೆಯಲ್ಲಿ ಇತ್ತೀಚೆಗೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ನಾಲ್ಕು ಕೊಲೆಗಳ ಆರೋಪಿಯ ಬಗ್ಗೆ “ಪ್ರಿಪ್ರೇಶನ್ ಇಲ್ಲದೆ ಪ್ರವೀಣ್ ಚೌಗಲೆಯನ್ನು ಕೊಲ್ಲುವ ಒಂದು ಸುಲಭದ ದಾರಿಯನ್ನು ನೇಜಾರಿನವರು ಕಳೆದುಕೊಂಡರು “ ಎಂಬ ಪೋಸ್ಟ್ ಹಾಕಿದ್ದನು.

ಈತ ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಸಂದೇಶ ಹರಿಬಿಟ್ಟು ವಿವಿಧ ವರ್ಗಗಳ ನಡುವೆ ದ್ವೇಷ ಸೃಷ್ಟಿಸುವ ಉದ್ದೇಶ ಹೊಂದಿರುವುದಾಗಿ ಆರೋಪಿಸಿ ಪ್ರಕರಣ ದಾಖಲಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News