ಉಡುಪಿ, ನ.29: ನನ್ನ ಅಧಿಕಾರದ ಅವಧಿಯಲ್ಲಿ ಕಾರ್ಯಕರ್ತರ ಕಷ್ಟಗಳಿಗೆ ಸ್ಪಂದಿಸುವಲ್ಲಿ ನಾನು ಸದಾ ಸಿದ್ದನಿ ದ್ದೇನೆ. ಪ್ರತಿ ಕ್ಷೇತ್ರಗಳಲ್ಲಿ ಪಕ್ಷವನ್ನು ಸಂಘಟಿಸುವಲ್ಲಿ ಪೂರಕ ವಾತಾವರಣ ನಿರ್ಮಾಣವಾಗಬೇಕಿದ್ದು, ಇದಕ್ಕಾಗಿ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಪಕ್ಷದ ಕಚೇರಿ ಸ್ಥಾಪನೆಗೆ ಸ್ಥಳ ಗುರುತಿಸಲಾಗಿದೆ. ಮುಂದಿನ ದಿನಗಳಲ್ಲಿ ಬ್ಲಾಕ್ ಅಧ್ಯಕ್ಷರ ಸಹಕಾರದಿಂದ ಅಲ್ಲಿ ಶೀಘ್ರ ಕಟ್ಟಡ ಕಟ್ಟುವ ಕಾರ್ಯ ಮಾಡಲಾಗುವುದು ಎಂದು ವಿಧಾನ ಪರಿಷತ್ತಿನ ಮುಖ್ಯ ಸಚೇತಕರಾಗಿ ಆಯ್ಕೆಗೊಂಡ ಮಂಜುನಾಥ್ ಭಂಡಾರಿ ಹೇಳಿದ್ದಾರೆ.

ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಶನಿವಾರ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಗೌರವಾರ್ಪಣೆ ಸ್ವೀಕ ರಿಸಿ ಅವರು ಮಾತನಾಡುತಿದ್ದರು. ಹಂತ ಹಂತವಾಗಿ ಪಕ್ಷದಲ್ಲಿ ತೊಡಗಿಸಿಕೊಂಡು ಇಂದು ನಾನು ಈ ಹಂತಕ್ಕೆ ತಲುಪಲು ದಿ.ಆಸ್ಕರ್ ಫೆರ್ನಾಂಡೀಸ್‌ರ ಮಾರ್ಗದರ್ಶನ ಹಾಗೂ ಕಾರ್ಯಕರ್ತರ ಬೆಂಬಲ ಕಾರಣ ಎಂದರು.

ಸಭೆಯಲ್ಲಿ ಮಾಜಿ ಸಚಿವ ಹಾಗೂ ಸಂಸದರಾದ ಕೆ. ಜಯಪ್ರಕಾಶ್ ಹೆಗ್ಡೆ ಅವರು ಪರಿಷತ್‌ನ ನೂತನ ಸಚೇತ ಕರನ್ನು ಅಭಿನಂದಿಸಿ ಪಕ್ಷದ ಪರವಾಗಿ ಗೌರವಿಸಿದರು.

ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಶೋಕ್‌ಕುಮಾರ್ ಕೊಡವೂರು, ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ರಾಜು ಪೂಜಾರಿ, ದಿನೇಶ್ ಹೆಗ್ಡೆ ಮೊಳಹಳ್ಳಿ, ದಿನಕರ ಹೇರೂರು, ರಮೇಶ್ ಕಾಂಚನ್, ವೈ. ಸುಕು ಮಾರ್, ಗೋಪಿನಾಥ್ ಭಟ್, ಮದನ್ ಕುಮಾರ್, ಕೃಷ್ಣಶೆಟ್ಟಿ ಬಜೆಗೋಳಿ, ಬಿ.ಭುಜಂಗ ಶೆಟ್ಟಿ, ನವೀನ್‌ಚಂದ್ರ ಶೆಟ್ಟಿ, ವಿಶ್ವಾಸ್ ಅಮೀನ್, ಹರಿಪ್ರಸಾದ್ ರೈ, ಹಬೀಬ್ ಆಲಿ, ಪ್ರಖ್ಯಾತ ಶೆಟ್ಟಿ, ಕಿಶೋರ್ ಕುಮಾರ್ ಎರ್ಮಾಳ್, ಜಯ ಕುಮಾರ್, ಮಿನಾಕ್ಷಿ ಮಾಧವ ಬನ್ನಂಜೆ, ಮಹಾಬಲ ಕುಂದರ್, ಹರೀಶ್ ಶೆಟ್ಟಿ ಪಾಂಗಾಳ, ಕೃಷ್ಣಮೂರ್ತಿ ಆಚಾರ್ಯ, ಶಬ್ಬಿರ್ ಅಹ್ಮದ್, ನೀರೆ ಕೃಷ್ಣ ಶೆಟ್ಟಿ, ವಾಸುದೇವ ಯಡಿಯಾಳ, ಮುರಳಿ ಶೆಟ್ಟಿ, ಗೀತಾ ವಾಗ್ಳೆ, ರೋಶನಿ ಒಲಿವರಾ, ದಿವಾಕರ ಕುಂದರ್, ರೋಶನ್ ಶೆಟ್ಟಿ, ಕೀರ್ತಿ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಸ್ವಾಗತಿಸಿ, ಜಿಲ್ಲಾ ಕಾಂಗ್ರೆಸ್ ವತಿಯಿಂದ ಸಚೇತಕರಿಗೆ ಗೌರವಿಸಿದರು. ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಹರೀಶ್ ಕಿಣಿ ಹಾಗೂ ಜಿಲ್ಲಾ ವಕ್ತಾರ ಭಾಸ್ಕರ್ ರಾವ್ ಕಿದಿಯೂರು ಕಾರ್ಯಕ್ರಮ ನಿರ್ವಹಿಸಿದರು. ಜಿಲ್ಲಾ ಪ್ರಧಾನ ಕಾರ್ಯ ದರ್ಶಿ ಬಿ.ನರಸಿಂಹಮೂರ್ತಿ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor