×
Ad

ಅಕ್ಟೋಬರ್‌ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಎಲ್ಲೂರಿನ ಅಂಗನವಾಡಿ ಕೇಂದ್ರ ಉದ್ಘಾಟನೆ

Update: 2025-08-15 21:56 IST

ಪಡುಬಿದ್ರಿ: ಅಂಗನವಾಡಿಗಳು ಪ್ರಾರಂಭವಾಗಿ 50 ವರ್ಷಗಳಾ ಗುತ್ತಿರುವ ಹಿನ್ನೆಲೆಯಲ್ಲಿ ಇದೇ ಬರುವ ಅಕ್ಟೋಬರ್ 2ರ ಸುಮಾರಿಗೆ ಸುವರ್ಣ ಮಹೋತ್ಸವ ಆಚರಿಸಲು ಸಿದ್ಧತೆಗಳನ್ನು ಮಾಡಲಾಗುತ್ತಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಉಡುಪಿ ಜಿಲ್ಲಾಡಳಿತ, ಉಡುಪಿ ಜಿಲ್ಲಾ ಪಂಚಾಯತ್, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಾಪು ತಾಲೂಕು ಪಂಚಾಯತ್‌ಗಳ ಸಹಯೋಗದಲ್ಲಿ ಎಲ್ಲೂರಿನ ದುರ್ಗಾನಗರದಲ್ಲಿ ನೂತನವಾಗಿ ನಿರ್ಮಿಸಿರುವ ಅಂಗನವಾಡಿ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಮಕ್ಕಳಿಗೆ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಮತ್ತಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ ಎಲ್‌ಕೆಜಿ ಹಾಗೂ ಯುಕೆಜಿಯನ್ನು ಪ್ರಾರಂಭಿಸಲಾಗುತ್ತದೆ. ರಾಜ್ಯದಲ್ಲಿ 70 ಸಾವಿರ ಅಂಗನವಾಡಿ ಕೇಂದ್ರಗಳಿದ್ದು, ಹಂತ ಹಂತವಾಗಿ ಎಲ್ಲಾ ಕೇಂದ್ರಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಪೂರ್ವ ಪ್ರಾಥಮಿಕ ಹಂತದಲ್ಲಿ ಎಲ್‌ಕೆಜಿ/ಯುಕೆಜಿ ಆರಂಭಿಸಲಿರುವ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೂ ಕರ್ನಾಟಕ ಪಾತ್ರವಾಗಲಿದೆ ಎಂದು ಸಚಿವೆ ನುಡಿದರು.

ಕಾರ್ಯಕ್ರಮದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್, ಮಾಜಿ ಸಚಿವ ವಿನಯ್‌ಕುಮಾರ್ ಸೊರಕೆ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಪಂ ಸಿಇಒ ಪ್ರತೀಕ್ ಬಾಯಲ್, ಉಪವಿಭಾಗಧಿಕಾರಿ ಎಸ್.ಆರ್.ರಶ್ಮಿ, ಕಾಪು ತಹಶೀಲ್ದಾರ್ ಪ್ರತಿಭಾ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶ್ಯಾಮಲಾ ಅವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News