×
Ad

ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಅನಿತಾ ಡಿಸೋಜ ಆಯ್ಕೆ

Update: 2025-05-24 14:26 IST

ಕಾರ್ಕಳ, ಮೇ 24: ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಅಲ್ಕಾ ಲಾಂಬಾ ಅವರ ಅನುಮೋದನೆಯ ಮೇರೆಗೆ, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಸೌಮ್ಯ ರೆಡ್ಡಿ ಅವರ ಆದೇಶದಂತೆ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಅನಿತಾ ಡಿಸೋಜ ಬೆಳ್ಮಣ್ ಅವರನ್ನು ನೇಮಕ ಮಾಡಲಾಗಿದೆ.

ಅನಿತಾ ಡಿಸೋಜ ಬೆಳ್ಮಣ್ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ ರಾಗಿದ್ದು, ಗ್ರಾಪಂ ಸದಸ್ಯರಾಗಿ, ಕಾರ್ಕಳ ಬ್ಲಾಕ್ ಮಹಿಳಾ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿನ ಕಾರ್ಯದಕ್ಷತೆ, ಸಮಾಜ ಸೇವೆಯನ್ನು ಗುರುತಿಸಿ ಪಕ್ಷವು ಅವರಿಗೆ ಈ ಹುದ್ದೆಯನ್ನು ನೀಡಿದ್ದು, ತಕ್ಷಣವೇ ಜಾರಿಯಾಗುವಂತೆ ಪಕ್ಷ ಸಂಘಟನೆಯಲ್ಲಿ ತೊಡಗುವಂತೆ ರಾಜ್ಯಾಧ್ಯಕ್ಷರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News