×
Ad

ಅನ್ನಪೂರ್ಣ ಶೆಣೈಗೆ ಐಇಇಇ ಉತ್ತಮ ವಿದ್ಯಾರ್ಥಿ ಸ್ವಯಂಸೇವಕ ಪ್ರಶಸ್ತಿ

Update: 2026-01-22 19:58 IST

ಉಡುಪಿ: ಬಂಟಕಲ್ಲು ಶ್ರೀಮಧ್ವವಾದಿರಾಜ ತಾಂತ್ರಿಕ ಮಹಾ ದ್ಯಾಲಯದ ಐಇಇಇ ವಿದ್ಯಾರ್ಥಿ ಘಟಕದ ಅಧ್ಯಕ್ಷೆ ಅನ್ನಪೂರ್ಣ ಶೆಣೈ ಅವರಿಗೆ ಐಇಇಇ ಘಟಕ ಬೆಂಗಳೂರು ವಿಭಾಗದಿಂದ ಉತ್ತಮ ವಿದ್ಯಾರ್ಥಿ ಸ್ವಯಂ ಸೇವಕಿ ಪ್ರಶಸ್ತಿ ದೊರೆತಿದೆ.

ಈ ಪ್ರಶಸ್ತಿಯನ್ನು ಇತ್ತೀಚೆಗೆ ಬೆಂಗಳೂರಿನಲ್ಲಿ ಆಯೋಜಿಸಲಾದ ಐಇಇಇ ಬೆಂಗಳೂರು ವಿಭಾಗದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಪ್ರದಾನ ಮಾಡಲಾಯಿತು.

ಈ ಪ್ರಶಸ್ತಿಯು ಅನ್ನಪೂರ್ಣ ಶೆಣೈ ಐಇಇಇ ಘಟಕದ ವಿದ್ಯಾರ್ಥಿ ಚಟುವಟಿಕೆಯನ್ನು ಬಲಪಡಿಸುವಲ್ಲಿ ತೋರಿದ ನಾಯಕತ್ವ, ಸಮರ್ಪಣೆ ಹಾಗೂ ನಿರಂತರ ಸೇವೆ ಮತ್ತು ತಾಂತ್ರಿಕ ಕಾರ್ಯಾಗಾರಗಳು, ವೃತ್ತಿಪರ ಅಭಿವೃದ್ಧಿ ಕಾರ್ಯಕ್ರಮಗಳು, ಸದಸ್ಯತ್ವ ಉಪಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಿದಕ್ಕಾಗಿ ದೊರೆತಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News