ಕಲ್ಮಾಡಿ ವೆಲಂಕಣಿ ಮಾತೆಯ ವಾರ್ಷಿಕ ಮಹೋತ್ಸವ ಆಚರಣೆ
Update: 2023-08-15 18:49 IST
ಉಡುಪಿ, ಆ.15: ಕಲ್ಮಾಡಿಯ ಸ್ಟೆಲ್ಲಾ ಮಾರಿಸ್ ಚರ್ಚ್‌ನಲ್ಲಿ ವೆಲಂಕಣಿ ಮಾತೆಯ ವಾರ್ಷಿಕ ಮಹೋತ್ಸವವನ್ನು ಮಂಗಳವಾರ ಭಕ್ತಿಪೂರ್ವಕವಾಗಿ ಆಚರಿಸಲಾಯಿತು.
ಪ್ರತಿ ವರ್ಷದಂತೆ ಸಾವಿರಾರು ಭಕ್ತಾಧಿಗಳು ಈ ಕ್ಷೇತ್ರಕ್ಕೆ ಭೇಟಿ ನೀಡಿ ಬಲಿಪೂಜೆಯಲ್ಲಿ ಪಾಲ್ಗೊಂಡರು. ಪ್ರಮುಖ ಬಲಿಪೂಜೆ ಯನ್ನು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತೀ ವಂ.ಡಾ.ಜೆರಾಲ್ಡ್ ಐಸಾಕ್ ಲೋಬೋ ನೆರವೇರಿಸಿ, ಸಂದೇಶ ನೀಡಿದರು.
ಪುಣ್ಯಕ್ಷೇತ್ರದ ರೆಕ್ಟರ್ ವಂ.ಬ್ಯಾಪ್ಟಿಸ್ಟ್ ಮಿನೇಜಸ್, ವಿಕಾರ್ ಜೆರಾಲ್ ವಂ. ಫರ್ಡಿನಾಂಡ್ ಗೊನ್ಸಾಲ್ವಿಸ್, ವಂ.ಚಾರ್ಲ್ಸ್ ಮಿನೇಜಸ್ ಹಾಗೂ ಧರ್ಮ ಪ್ರಾಂತ್ಯದ ಇತರ ಧರ್ಮಗುರುಗಳು ಪಾಲ್ಗೊಂಡರು. ಇತರೆ ಬಲಿಪೂಜೆಗಳು ನಡೆದವು.