ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿಗೆ ಮತ್ತೊಂದು ವಿವಾದ
► ಮಾಜಿ ರೌಡಿಶೀಟರ್‌ಗೆ ಆಶೀರ್ವಾದ ಮಾಡುವ ವೀಡಿಯೊ ವೈರಲ್
Update: 2026-05-26 21:23 IST
ಉಡುಪಿ: ಜಿಲ್ಲೆಯಲ್ಲಿ ಪ್ರವಾಸ ಹಮ್ಮಿಕೊಂಡಿದ್ದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿಗೆ ಮತ್ತೊಂದು ವಿವಾದ ಸುತ್ತಿಕೊಂಡಿದೆ.
ಚೌಧರಿ ಅವರು ಮಾಜಿ ರೌಡಿಶೀಟರ್‌ಗೆ ಆಶೀರ್ವಾದ ಮಾಡುವ ವೀಡಿಯೊ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಇತ್ತೀಚೆಗಷ್ಟೇ ಡಾ. ನಾಗಲಕ್ಷ್ಮೀ ಚೌಧರಿ ರೌಡಿ ಶೀಟರ್ ಪುನೀತ್ ಕೆರೆಹಳ್ಳಿಗೆ ಶುಭ ಹಾರೈಸಿದ್ದ ವಿಡಿಯೋ ಸಾಕಷ್ಟು ವೈರಲ್ ಆಗಿ ವಿವಾದ ಸೃಷ್ಟಿಸಿತ್ತು. ಇದೀಗ ಉಡುಪಿ ಜಿಲ್ಲೆಯ ಪ್ರವಾಸದ ಸಂದರ್ಭದಲ್ಲಿ ಅವರೊಂದಿಗೆ ಇದ್ದ ಮಾಜಿ ರೌಡಿ ಶೀಟರ್ ಸೋನು ಸುಧೀರ್‌ಗೆ ಕಾರಿನಲ್ಲಿ ಕುಳಿತು ತಲೆ ಮುಟ್ಟಿ ಆಶೀರ್ವದಿಸುವ ವೀಡಿಯೊ ವೈರಲ್ ಆಗುತ್ತಿದೆ.
ಸೋನು ಸುಧೀರ್ ವಿರುದ್ಧ ಎರಡು ಪ್ರಕರಣಗಳಿದ್ದು, 2021ರಿಂದ 2023ರವರೆಗೆ ಕಾಪು ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ಪ್ರಕರಣ ದಾಖಲಾಗಿತ್ತು.