×
Ad

ಪ್ರಭಾಕರ್ ಭಟ್ ಬಂಧನಕ್ಕೆ ಆಗ್ರಹಿಸಿ ಕಾಪು ಠಾಣೆಗೆ ಮನವಿ

Update: 2023-12-26 19:52 IST

ಉಡುಪಿ: ಮಂಡ್ಯದಲ್ಲಿ ನಡೆದ ಸಮಾವೇಶದಲ್ಲಿ ಉದ್ದೇಶಪೂರ್ವಕ ವಾಗಿ ಮಹಿಳೆಯರನ್ನು ಅತ್ಯಂತ ಕೀಳಾಗಿ ಅವಮಾನಿಸಿದ ಕಲ್ಲಡ್ಕ ಪ್ರಭಾಕರ್ ಭಟ್ ಬಂಧನಕ್ಕೆ ಒತ್ತಾಯಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್(ವಿಮ್) ಉಡುಪಿ ಜಿಲ್ಲೆ ವತಿಯಿಂದ ಡಿ.26ರಂದು ಕಾಪು ಪೊಲೀಸ್ ಠಾಣೆಗೆ ಮನವಿ ಸಲ್ಲಿಸಲಾಯಿತು.

ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ, ಮುಸಲ್ಮಾನರ ಧಾರ್ಮಿಕ ಭಾವನೆಗಳಿಗೆ ಕುಂದುಂಟು ಮಾಡಿದ ಹಾಗೂ ಮುಸ್ಲಿಂ ಮಹಿಳೆಯರ ಹಕ್ಕುಗಳಿಗೆ ಚ್ಯುತಿ ಉಂಟು ಮಾಡಿದ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಕೂಡಲೇ ಬಂಧಿಸಬೇಕೆಂದು ನಿಯೋಗ ಆಗ್ರಹಿಸಿದೆ.

ಈ ಸಂದರ್ಭದಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್ ಉಡುಪಿ ಜಿಲ್ಲಾಧ್ಯಕ್ಷೆ ನಾಝಿಯ ನಸ್ರುಲ್ಲ, ಕಾರ್ಯದರ್ಶಿ ಹಾಜಿರ ಉಚ್ಚಿಲ, ವಿಮ್ ಕಾಪು ಘಟಕದ ಕಾರ್ಯದರ್ಶಿ ನೌಶಿನ್ ಮತ್ತು ಕಾಪು ಘಟಕದ ಪದಾಧಿಕಾರಿ ವಹಿದಾ ಶರೀಫ್ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News