×
Ad

ಮಕ್ಕಳ ಕರ್ನಾಟಕ ರಾಜ್ಯೋತ್ಸವ: ಬಾಲ ಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2024-11-03 14:23 IST

ಕಾಪು, ನ.3: ಇನ್ವೆಂಜರ್ ಫೌಂಡೇಷನ್ ಮಂಗಳೂರು, ಸೃಷ್ಠಿ ಫೌಂಡೇಶನ್ ಕಟಪಾಡಿ, ಪ್ರಥಮ್ಸ್ ಮ್ಯಾಜಿಕ್ ವರ್ಲ್ಡ್ ಕಟಪಾಡಿ, ಮಾನ್ಯ ಎಜ್ಯುಕೇಷನಲ್ ಆಂಡ್ ಕಲ್ಚರಲ್ ಫೌಂಡೇಶನ್ ಮಸ್ಕತ್ ವತಿಯಿಂದ ನೀಡಲಾಗುವ ಮಕ್ಕಳ ಕರ್ನಾಟಕ ರಾಜ್ಯೋತ್ಸವ-2024 ಬಾಲಪ್ರಶಸ್ತಿಗೆ ಅರ್ಹ ಪ್ರತಿಭಾವಂತ ಮಕ್ಕಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

5ರಿಂದ 18ವರ್ಷದೊಳಗಿನ ಮಕ್ಕಳು ಕ್ರೀಡೆ, ಸಂಗೀತ, ನೃತ್ಯ, ಚಿತ್ರಕಲೆ, ವಿಜ್ಞಾನ, ಸಂಶೋಧನೆ ಸೇರಿದಂತೆ ಬಹುಮುಖ ಪ್ರತಿಭೆಗಳನ್ನು ಬಾಲಪ್ರಶಸ್ತಿಗೆ ಪರಿಗಣಿಸಲಾಗುವುದು. ಯಾವುದೇ ಕ್ಷೇತ್ರದಲ್ಲಿ ಜಿಲ್ಲಾ, ರಾಜ್ಯ ಮತ್ತು ರಾಷ್ಟ ಮಟ್ಟದ ಪ್ರಶಸ್ತಿ ವಿಜೇತರು ಅರ್ಜಿ ಸಲ್ಲಿಸಬಹುದು. ಆಸಕ್ತರು ತಮ್ಮ ಸಾಧನೆಗಳ ಕುರಿತ ಸವಿವರ ಮಾಹಿತಿಯನ್ನು ಸೂಕ್ತ ಸ್ವಯಂ ದೃಢೀಕರಣ ಮಾಡಿ ಅರ್ಜಿಯನ್ನು ನ.15ರೊಳಗೆ ಕಾಮತ್ ಸರ್ವಿಸಸ್, ಎಸ್.ವಿ.ಎಸ್ ಹಿರಿಯ ಪ್ರಾಥಮಿಕ ಶಾಲೆ ಎದುರು, ಹಳೇ ರಸ್ತೆ ಕಟಪಾಡಿ ಅಂಚೆ ಉಡುಪಿ ಜಿಲ್ಲೆ-574105 ಈ ವಿಳಾಸಕ್ಕೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಕೆ.ನಾಗೇಶ್ ಕಾಮತ್ - 9886432197, ಪ್ರಕಾಶ ಸುವರ್ಣ ಕಟಪಾಡಿ -9964019229. ಮಕ್ಕಳಲ್ಲಿ ಹುದುಗಿರುವ ಸುಪ್ತ ಪ್ರತಿಭಾ ಪ್ರದರ್ಶನಕ್ಕೂ ಅವಕಾಶ ನೀಡಿ ಸೂಕ್ತ ವೇದಿಕೆ ಕಲ್ಪಿಸುವ ವಿನೂತನ ಕಾರ್ಯಕ್ರಮವನ್ನು ನವೆಂಬರ್ ತಿಂಗಳ ಅಂತ್ಯಕ್ಕೆ ಆಯೋಜಿಸಲಾಗಿದೆ. ಇದೇ ವೇಳೆ ಗಾನಗಂಧರ್ವ ಎಸ್ಪಿಬಿ ಸಂಗೀತೋತ್ಸವ ಹಾಗೂ ಪ್ರಶಸ್ತಿ ವಿಜೇತ ಮಕ್ಕಳಿಂದ ಸಾಂಸ್ಕೃತಿಕ ವೈಭವನ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News