ಗೃಹರಕ್ಷಕ ದಳದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ
Update: 2023-10-26 21:27 IST
ಉಡುಪಿ, ಅ.26: ಜಿಲ್ಲಾ ಗೃಹರಕ್ಷಕ ದಳದಲ್ಲಿ ಸ್ವಯಂಸೇವಕರಾಗಿ ಕರ್ತವ್ಯ ನಿರ್ವಹಿಸಲು ಇಚ್ಛಿಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
19ರಿಂದ 50 ವರ್ಷದೊಳಗಿನ, ಕನಿಷ್ಠ 167 ಸೆಂ.ಮೀ. ಎತ್ತರ ಇರುವ, ಎಸೆಸೆಲ್ಸಿ ಉತ್ತೀರ್ಣರಾಗಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿ ಗಾಗಿ ಜಿಲ್ಲಾ ಸಮಾದೇಷ್ಟರ ಕಚೇರಿ, ಜಿಲ್ಲಾ ಅಗ್ನಿಶಾಮಕ ಕಚೇರಿ ಆವರಣದ ಹತ್ತಿರ, ಅಜ್ಜರಕಾಡು, ಉಡುಪಿ ದೂ.ಸಂಖ್ಯೆ: 0820-2535650 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.