×
Ad

ಸೈನಿಕ ತರಬೇತಿಗೆ ಅರ್ಜಿ ಆಹ್ವಾನ

Update: 2023-08-23 19:56 IST

ಉಡುಪಿ, ಆ.೨೩:ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಭಾರತೀಯ ಸೇನೆ ಹಾಗೂ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ, ೩ಎ ಹಾಗೂ ೩ಬಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಎಸೆಸೆಲ್ಸಿ ಉತ್ತೀರ್ಣರಾಗಿರುವ, ೨೦೦೩ರ ಜನವರಿ ೧ರಿಂದ ೨೦೦೬ರ ಜುಲೈ ೧ರ ನಡುವೆ ಜನಿಸಿರುವ ಅರ್ಹ ಅಭ್ಯರ್ಥಿ ಗಳು ಅರ್ಜಿ ಸಲ್ಲಿಸಬಹುದಾಗಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರಕನ್ನಡ ಜಿಲ್ಲೆಗಳಲ್ಲಿ ಈ ತರಬೇತಿ ನೀಡಲಾಗುವುದು.

ಅರ್ಜಿ ಸಲ್ಲಿಸಲು ಸೆಪ್ಟಂಬರ್ ೧೫ ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಳಿಗಾಗಿ ಇಲಾಖಾ ವೆಬ್‌ಸೈಟ್: https://bcwd.karnataka.gov.in- ಅಥವಾ ಸಹಾಯವಾಣಿ ಸಂಖ್ಯೆ: ೮೦೫೦೭೭೦೦೦, ದೂ.ಸಂಖ್ಯೆ: ೦೮೨೦-೨೫೭೪೮೮೧ ಅನ್ನು ಸಂಪರ್ಕಿಸ ಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News