×
Ad

ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2023-08-16 20:33 IST

ಉಡುಪಿ, ಆ.16: ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು, ಮಕ್ಕಳ ಶಕ್ತಿ ಸಂಕಲ್ಪ ಸಾಮರ್ಥ್ಯ ಹಾಗೂ ಉತ್ಸಾಹವನ್ನು ಆಚರಿಸಲು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಯನ್ನು ಆಯೋಜಿಸಿದೆ.

ಈ ಪ್ರಶಸ್ತಿಗೆ ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜ ಸೇವೆ, ವಿಜ್ಞಾನ ಹಾಗೂ ತಂತ್ರಜ್ಞಾನ, ಪರಿಸರ ಸಂರಕ್ಷಣೆ, ಕಲೆ ಮತ್ತು ಸಂಸ್ಕೃತಿ ಮತ್ತು ನೂತನ ಆವಿಷ್ಕಾರಗಳನ್ನು ಮಾಡಿ ಉತ್ತಮ ಸಾಧನೆ ಮಾಡಿದ 18 ವರ್ಷದೊಳಗಿನ ಮಕ್ಕಳು ಆನ್‌ಲೈನ್ ಮುಖಾಂತರ ಆಗಸ್ಟ್ 31 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಬಿ ಬ್ಲಾಕ್, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ ಮಣಿಪಾಲ ದೂರವಾಣಿ: 0820-2574964ನ್ನು ಸಂಪರ್ಕಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News