×
Ad

ಉಡುಪಿ ಜಿಲ್ಲಾ ಮಟ್ಟದ ಅಂಚೆ ಚೀಟಿ ಪ್ರದರ್ಶನಕ್ಕೆ ಅರ್ಜಿ ಆಹ್ವಾನ

Update: 2023-09-26 20:20 IST

ಉಡುಪಿ, ಸೆ.26: ಉಡುಪಿ ಅಂಚೆ ವಿಭಾಗದ ವತಿಯಿಂದ ನ.18 ಮತ್ತು 19ರಂದು ಜಿಲ್ಲಾ ಮಟ್ಟದ ಅಂಚೆ ಚೀಟಿ ಪ್ರದರ್ಶನ ‘ಕೃಷ್ಣಾಪೆಕ್ಸ್ - 2023’ ನ್ನು ಆಯೋಜಿಸಿದ್ದು, ಈ ಸಂಬಂಧ ಕೃಷ್ಣಾಪೆಕ್ಸ್-2023 ಲಾಂಛನವನ್ನು ಅನಾವರಣಗೊಳಿಸಲಾಗಿದೆ.

ಜಿಲ್ಲೆಯಲ್ಲಿರುವ ಅಂಚೆಚೀಟಿ ಪ್ರದರ್ಶನಕಾರರಿಗೆ ಅಂಚೆ ಚೀಟಿ ಪ್ರದರ್ಶನ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾ ಗಿದ್ದು, ಇಪ್ಪತ್ತು ವರ್ಷ ಮೇಲ್ಪಟ್ಟ ಹಿರಿಯರು ಹಾಗೂ ಇಪ್ಪತ್ತು ವರ್ಷಕ್ಕಿಂತ ಕಡಿಮೆ ವಯಸ್ಸಿನ ಕಿರಿಯರಿಗೆ ಎಂಬ ಎರಡು ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ. ಇದಕ್ಕಾಗಿ ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವ ಅಂಚೆಚೀಟಿ ಸಂಗ್ರಾಹಕರಿಂದ ಅರ್ಜಿ ಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಅಂಚೆ ಅಧೀಕ್ಷಕರ ಕಚೇರಿ, ಅಂಚೆ ವಿಭಾಗ, ಉಡುಪಿ ಮೊ.ನಂ: 9449332706ನ್ನು ಸಂಪರ್ಕಿಸಬಹುದು ಎಂದು ಉಡುಪಿ ಅಂಚೆ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News