×
Ad

ಪ.ಜಾತಿ ಯುವಕರಿಗೆ ಉಚಿತ ಜಿಮ್ ತರಬೇತಿಗೆ ಅರ್ಜಿ ಆಹ್ವಾನ

Update: 2026-01-23 20:44 IST

ಉಡುಪಿ, ಜ.23: ಪ್ರಸಕ್ತ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿಯ ಉಪ ಯೋಜನೆಯಡಿ ಯುವ ಜನರನ್ನು ಸ್ವಾವಲಂಬಿಯಾಗಲು ಉತ್ತೇಜಿಸುವ ನಿಟ್ಟಿನಲ್ಲಿ ಪರಿಶಿಷ್ಟ ಜಾತಿಯ ಯುವಕ ರಿಗೆ 45 ದಿನಗಳ ಉಚಿತ ಜಿಮ್ ತರಬೇತಿ ಶಿಬಿರವನ್ನು ಫೆಬ್ರವರಿ 1ರಿಂದ ಮಾರ್ಚ್ 17ರವರೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಆಸಕ್ತ ಎಸೆಸೆಲ್ಸಿ ಉತ್ತೀರ್ಣರಾದ 18ರಿಂದ 35 ವರ್ಷದೊಳಗಿನ ಪರಿಶಿಷ್ಟ ಜಾತಿಯ ಅರ್ಹ ಯುವಕರು ಪ್ರಸ್ತಾವನೆ ಗಳನ್ನು ಸಲ್ಲಿಸಲು ಜನವರಿ 30 ಕೊನೆಯ ದಿನವಾಗಿರುತ್ತದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯ ವಾಣಿ ಸಂಖ್ಯೆ: 155265 ಅಥವಾ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2521324, ಮೊ.ನಂ: 9845432303 ಅನ್ನು ಸಂಪರ್ಕಿಸಬಹುದು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News