ಅಪ್ರೆಂಟಿಶಿಪ್ ತರಬೇತಿ: ಪತ್ರಿಕೋದ್ಯಮ ಪದವೀಧರರಿಂದ ಅರ್ಜಿ ಆಹ್ವಾನ
ಉಡುಪಿ, ಡಿ.10: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿಯ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ 12 ತಿಂಗಳ ಅಪ್ರೆಂಟಿಸ್ ತರಬೇತಿಗೆ ಅರ್ಹ ಪತ್ರಿಕೋದ್ಯಮ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿ ಗಳಿಂದ ಅರ್ಜಿ ಅಹ್ವಾನಿಸಲಾಗಿದೆ.
ಉಡುಪಿ ಜಿಲ್ಲಾ ಕಚೇರಿಗೆ 2025-26ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಇಬ್ಬರು ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾ ಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್ಗೆ ತರಬೇತಿ ಅವಧಿಯಲ್ಲಿ ತಿಂಗಳಿಗೆ 15 ಸಾವಿರ ರೂ.ಗಳ ಸ್ಟೈಪಂಡ್ ನೀಡಲಾಗುವುದು. ತರಬೇತಿಯು 2026ರ ಜನವರಿ ತಿಂಗಳಿನಿಂದ ಪ್ರಾರಂಭಗೊಂಡು ಡಿಸೆಂಬರ್ಗೆ ಕೊನೆ ಗೊಳ್ಳಲಿದೆ. ಅಭ್ಯರ್ಥಿ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರುವುದು ಕಡ್ಡಾಯ. ಕನ್ನಡ ಭಾಷೆ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು. ಅಭ್ಯರ್ಥಿಗಳ ವಯಸ್ಸು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದಂದು 35 ವಷರ್ದೊಳಗಿರಬೇಕು.
ಅರ್ಜಿ ಸಲ್ಲಿಸಲು ಡಿಸೆಂಬರ್ 22 ಕೊನೆಯ ದಿನ. ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಭವನ, ನಾಯರ್ಕೆರೆ, ಬ್ರಹ್ಮಗಿರಿ, ಉಡುಪಿ ಕಚೇರಿಯನ್ನು ಸಂಪರ್ಕಿಸುವಂತೆ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.