×
Ad

ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯರಾದ ಅಶೋಕ್ ರಾವ್, ಈಶ್ವರ್ ಬಿಜೆಪಿಗೆ ಸೇರ್ಪಡೆ

Update: 2023-08-28 20:59 IST

ಉಡುಪಿ, ಆ.28: ಬ್ಲಾಕ್ ಕಾಂಗ್ರೆಸ್ ದಕ್ಷಿಣ ವಲಯ ಉಪಾಧ್ಯಕ್ಷ, ಕಟಪಾಡಿ ಗ್ರಾಪಂ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಅಶೋಕ್ ರಾವ್ ಹಾಗೂ ಕಟಪಾಡಿ ಗ್ರಾಮ ಪಂಚಾಯತ್ ಕಾಂಗ್ರೆಸ್ ಬೆಂಬಲಿತ ಪಂಚಾಯತ್ ಸದಸ್ಯ ಈಶ್ವರ್ ಇಂದು ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್ ಅವರು ಪಕ್ಷದ ಬಾವುಟವನ್ನು ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಮೂಡಬೆಟ್ಟು ಶಕ್ತಿ ಕೇಂದ್ರದ ನಿತಿನ್ ಮತ್ತು ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯರು, ಕಾಪು ಪುರಸಭೆಯ ಸದಸ್ಯರು, ಪಕ್ಷದ ಹಿರಿಯರು, ಪ್ರಮುಖರು, ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News