ಹೆಬ್ರಿ ಕಾಲೇಜಿನಲ್ಲಿ ಕಳವಿಗೆ ಯತ್ನ
Update: 2023-09-07 21:22 IST
ಹೆಬ್ರಿ, ಸೆ.7: ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸೆ.6ರಂದು ರಾತ್ರಿ ನುಗ್ಗಿದ ಕಳ್ಳರು ಕಳವಿಗೆ ಯತ್ನಿಸಿರುವ ಬಗ್ಗೆ ವರದಿಯಾಗಿದೆ.
ಕಾಲೇಜಿನ ಹಿಂಬದಿ ಗೇಟ್‌ಗೆ ಹಾಕಿದ ಬೀಗ ಮತ್ತು ಕಾಲೇಜು ಕಛೇರಿಗೆ ಅಳವಡಿಸಿದ ಬೀಗವನ್ನು ಮುರಿದು ಒಳ ನುಗ್ಗಿದ ಕಳ್ಳರು, ಕೊಠಡಿಯಲ್ಲಿ ಹುಡುಕಾಡಿ ಅಲ್ಲಿನ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿ ಕಳ್ಳತನಕ್ಕೆ ಯತ್ನಿಸಿ ಹೋಗಿರುವುದಾಗಿ ದೂರಲಾಗಿದೆ. ಈ ಬಗ್ಗೆ ಕಾಲೇಜಿನ ಪ್ರಾಂಶುಪಾಲ ಡಾ.ವಿಷ್ಣುಮೂರ್ತಿ ನೀಡಿದ ದೂರಿನಂತೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.