×
Ad

ಆ.31: ಕಡೆಂಗೋಡ್ಲು, ಕೇಶವ ಪ್ರಶಸ್ತಿ ಪ್ರದಾನ

Update: 2024-08-29 21:06 IST

ಉಡುಪಿ, ಆ.29: 2024ನೇ ಸಾಲಿನ ಕಡೆಂಗೋಡ್ಲು ಕಾವ್ಯ ಪ್ರಶಸ್ತಿ ಹಾಗೂ ಕೇಶವ ಪ್ರಶಸ್ತಿ ಪ್ರದಾನ ಸಮಾರಂಭವು ಆ.31ರ ಶನಿವಾರ ಬೆಳಗ್ಗೆ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ.

2024ನೇ ಸಾಲಿನ ಕೇಶವ ಪ್ರಶಸ್ತಿಯನ್ನು ಹಿರಿಯ ಲೇಖಕಿ ಕಾಸರಗೋಡಿನ ಡಾ.ಯು.ಮಹೇಶ್ವರಿ ಹಾಗೂ ಕಡೆಂಗೋಡ್ಲು ಕಾವ್ಯ ಪ್ರಶಸ್ತಿಯನ್ನು ಶೈಲೇಶ್ ಕುಮಾರ್ ಶಿವಕುಮಾರ್ ಇವರಿಗೆ ಪ್ರದಾನ ಮಾಡಲಾಗುವುದು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂಜಿಎಂ ಕಾಲೇಜಿನ ಪ್ರಾಂಶುಪಾಲ ರಾದ ಪ್ರೊ.ಲಕ್ಷ್ಮೀನಾರಾಯಣ ಕಾರಂತ ವಹಿಸ ಲಿದ್ದು, ಮುಖ್ಯ ಅತಿಥಿಗಳಾಗಿ ಮಾಹೆಯ ಗಾಂಧಿಯನ್ ಸೆಂಟರ್‌ನ ನಿರ್ದೇಶಕ ಡಾ.ವರದೇಶ್ ಹಿರೇಗಂಗೆ ಭಾಗವಹಿಸಲಿದ್ದಾರೆ. ಸಲಿರುವರು.

ಪ್ರಶಸ್ತಿ ಪುರಸ್ಕೃತರ ಕುರಿತು ನಿವೃತ್ತ ಪ್ರಾಚಾರ್ಯ ಡಾ. ಉದಯ ಕುಮಾರ್ ಶೆಟ್ಟಿ ಹಾಗೂ ಪ್ರಾದೇಶಿಕ ರಂಗಕಲೆಗಳ ಅಧ್ಯಯನ ಕೇಂದ್ರದ ಸಹಾಯಕ ಸಂಶೋಧಕ ಡಾ. ಅರುಣ್‌ಕುಮಾರ್ ಎಸ್.ಆರ್ ಅಭಿನಂದನಾ ಭಾಷಣ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ನಿವೃತ್ತ ಕುಲಸಚಿವ ಡಾ.ಎ.ಸುಬ್ಬಣ್ಣ ರೈ ‘ಕನ್ನಡ ಕಾವ್ಯಗಳಲ್ಲಿ ಕಾವ್ಯಚಿಂತನ’ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಪ್ರಶಸ್ತಿ ಸಮಿತಿ ಸದಸ್ಯರಾದ ಪ್ರೊ. ತಾಳ್ತಜೆ ವಸಂತ ಕುಮಾರ್ ಹಾಗೂ ಟಿ.ಕೆ ರಘುಪತಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News