ಬಾಲಕಾರ್ಮಿಕ ಕಾಯ್ದೆ ಜಾಗೃತಿಗೆ ಅಟೋ ಜಾಥಾಕ್ಕೆ ಚಾಲನೆ
Update: 2023-11-03 21:08 IST
ಉಡುಪಿ, ನ.೩: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯೋಜನೆ ಗಳಡಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯಿದೆಯ ಕುರಿತು ಅರಿವು ಮೂಡಿಸುವ ಆಟೋ ಜಾಥಾಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ ಎಂ.ಟಿ.ರೇಜು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.