×
Ad

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಅರಿವು ಕಾರ್ಯಕ್ರಮ

Update: 2023-10-12 18:46 IST

ಉಡುಪಿ: ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಕಾರ್ಕಳ ತಾಲೂಕಿನ ಭುವನೇಂದ್ರ ಕಾಲೇಜಿ ನಲ್ಲಿ ನಡೆದ ಅರಿವು ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ ಮಂಜುನಾಥ್ ಎ. ಕೋಟ್ಯಾನ್ ಉದ್ಘಾಟಿಸಿದರು.

ತಾಲೂಕು ಆರೋಗ್ಯಾಧಿಕಾರಿ ಡಾ ಅರುಣಾ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ದೈಹಿಕ ಆರೋಗ್ಯದಷ್ಟೇ ಮಾನಸಿಕ ಆರೋಗ್ಯವೂ ಮುಖ್ಯ ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ಮಾನಸಿಕ ತಜ್ಞೆ ಡಾ.ರಿತಿಕಾ ವಿದ್ಯಾರ್ಥಿಗಳಿಗೆ ಮಾನಸಿಕ ಒತ್ತಡ ನಿಭಾಯಿಸುವುದು, ಅದರ ನಿರ್ವಹಣೆ ಬಗ್ಗೆ ಮಾಹಿತಿಯನ್ನು ನೀಡಿದರು.

ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಹೆಚ್ ಅಂಗಾಂಗದಾನ ನೊಂದಣಿ ಮಾಡುವ ಬಗ್ಗೆ ಪ್ರತಿಜ್ಞಾವಿಧಿ ಭೋದಿಸಿದರು.

ಕಾಲೇಜಿನ ಎನ್ನೆಸ್ಸೆಸ್ ಸಂಯೋಜನಾಧಿಕಾರಿ ಶಂಕರ್ ಕುಡ್ವ ಸ್ವಾಗತಿಸಿ, ಸುವರ್ಣಿ ಎನ್. ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News