ಉಡುಪಿ, ನ.28: ಕಮಲ್ ಎ.ಬಾಳಿಗ ಚಾರಿಟೇಬಲ್ ಟ್ರಸ್ಟ್, ಮುಂಬೈ, ಡಾ.ಎ.ವಿ. ಬಾಳಿಗ ಸ್ಮಾರಕ ಆಸ್ಪತ್ರೆಯ ಲೈಂಗಿಕ ಕಿರುಕುಳ ತಡೆ ಸಮಿತಿ, ಮಣಿಪಾಲ ಒಬಿಜಿ ಸೊಸೈಟಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಂಯುಕ್ತ ಆಶ್ರಯದಲ್ಲಿ ಜಾಗೃತಿ ಕಾರ್ಯಕ್ರಮವನ್ನು ಶನಿವಾರ ಉಡುಪಿಯ ಡಾ.ಎ.ವಿ.ಬಾಳಿಗ ಸ್ಮಾರಕ ಆಸ್ಪತ್ರೆಯ ಕಮಲ್ ಬಾಳಿಗ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಮಹಿಳೆಯರು ಮತ್ತು ಬಾಲಕಿಯರ ಮೇಲಿನ ಹಿಂಸಾಚಾರವನ್ನು ತಡೆಗಟ್ಟುವ ಹಾಗೂ ದೌರ್ಜನ್ಯದ ವಿರುದ್ಧ ಶೂನ್ಯ ಸಹಿಷ್ಣುತೆಯ ಮನೋಭಾವ ಬೆಳೆಸುವ ಉದ್ದೇಶದಿಂದ 16 ದಿನಗಳ ಜಾಗೃತಿ ಅಭಿಯಾನದ ಅಂಗವಾಗಿ ನಡೆದ ಕಾರ್ಯಕ್ರಮವನ್ನು ಮಣಿಪಾಲ ಒಬಿಜಿ ಸೊಸೈಟಿ ಅಧ್ಯಕ್ಷೆ ಡಾ.ರಾಜಲಕ್ಷ್ಮಿ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಮಣಿಪಾಲ ಒಬಿಜಿ ಸೊಸೈಟಿಯ ಕಾರ್ಯದರ್ಶಿ ಡಾ.ಇಂದಿರಾ ಶಾನುಭಾಗ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಾಯಕ ಕಾನೂನು ನೆರವು ರಕ್ಷಣಾ ಸಲಹೆಗಾರ ರಾದ ಭಾನುಮತಿ ಎಂ.ಆರ್.ನಾಯರಿ ಮಾತನಾಡಿದರು. ಆಸ್ಪತ್ರೆಯ ಆಡಳಿತ ಅಧಿಕಾರಿ ಸೌಜನ್ಯ ಶೆಟ್ಟಿ ಸ್ವಾಗತಿಸಿದರು. ಲೈಂಗಿಕ ಕಿರುಕುಳ ತಡೆ ಸಮಿತಿಯ ಅಧ್ಯಕ್ಷ ಪದ್ಮ ರಾಘವೇಂದ್ರ ವಂದಿಸಿದರು. ಆಪ್ತ ಸಮಾಲೋಚಕಿ ದೀಪಶ್ರೀ ಕಾರ್ಯಕ್ರಮ ನಿರೂಪಿಸಿದರು.

ಬಳಿಕ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಾಯಕ ಕಾನೂನು ನೆರವು ರಕ್ಷಣಾ ಸಲಹೆಗಾರರಾದ ಭಾನು ಮತಿ ಎಂ.ಆರ್.ನಾಯರಿ ಮಹಿಳೆಯರ ಹಕ್ಕುಗಳು, ಕೌಟುಂಬಿಕ ದೌರ್ಜನ್ಯ, ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ದೊರೆಯುವ ಕಾನೂನಾತ್ಮಕ ನೆರವು ಮತ್ತು ರಕ್ಷಣೆಯ ಕುರಿತು ಮಾಹಿತಿ ನೀಡಿದರು.

ಮಣಿಪಾಲ ಒಬಿಜಿ ಸೊಸೈಟಿಯ ಅಧ್ಯಕ್ಷೆ ಡಾ.ರಾಜಲಕ್ಷ್ಮಿ, ಕಾರ್ಯ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟುವ ಖಏ ಕಾಯ್ದೆಯ ಕುರಿತು ಮಾಹಿತಿ ಅಧಿವೇಶನ ನಡೆಸಿ, ಕಾಯ್ದೆಯ ಮಹತ್ವ, ಮಹಿಳೆಯರ ಹಕ್ಕುಗಳು ಹಾಗೂ ಸುರಕ್ಷಿತ ಕಾರ್ಯಸ್ಥಳದ ಅಗತ್ಯತೆಯ ಬಗ್ಗೆ ವಿವರಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor