×
Ad

ಆಹಾರದಲ್ಲಿ ಕೃತಕ ಬಣ್ಣ ಬಳಕೆ ನಿಷೇಧ: ಆದೇಶದ ಕಡ್ಡಾಯ ಪಾಲನೆಗೆ ಸೂಚನೆ

Update: 2024-08-30 21:27 IST

ಸಾಂದರ್ಭಿಕ ಚಿತ್ರ

ಉಡುಪಿ, ಆ.30: ಜಿಲ್ಲಾ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರದಿಂದ ವಿಶೇಷ ಅಂದೋಲನ ಹಮ್ಮಿಕೊಳ್ಳ ಲಾಗಿದ್ದು, ಆಹಾರ ಉದ್ಯಮದಲ್ಲಿ ತೊಡಗಿಕೊಂಡಿರುವ ಹೋಟೆಲ್, ಬೇಕರಿ, ದಿನಸಿ ಅಂಗಡಿ, ಆಹಾರ ತಯಾರಕರು, ಆಹಾರ ಸರಬರಾಜುದಾರರು, ಆಹಾರ ಪದಾರ್ಥ ಗಳ ವಿತರಕರು ಹಾಗೂ ಆಹಾರ ಉತ್ಪನ್ನಗಳನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ತೊಡಗಿಕೊಂಡಿರುವ ಎಲ್ಲಾ ಉದ್ಯಮಿಗಳು ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಕಾಯ್ದೆ ಅಡಿ ಪರವಾನಿಗೆ ಅಥವಾ ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ.

ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಆಹಾರ ಉದ್ಯಮಿಗಳು ಆಹಾರದ ಸುರಕ್ಷತೆ ಮತ್ತು ಶುಚಿತ್ವ ಕಾಪಾಡಿ ಕೊಳ್ಳಬೇಕು. ಆಹಾರ ಸುರಕ್ಷತಾ ಕಾಯ್ದೆಯ ಮಾನದಂಡಗಳಿಗೆ ಮೀರಿ ಆಹಾರದಲ್ಲಿ ಕೃತಕ ಬಣ್ಣವನ್ನು ಬಳಸುವುದನ್ನು ನಿಷೇಧಿಸಲಾಗಿರುವುದರಿಂದ ಅದನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಮೊಟ್ಟೆ, ಮೀನು ಮತ್ತು ಮಾಂಸದ ಆಹಾರ ಪದಾರ್ಥಗಳನ್ನು ಸೂಕ್ತ ತಾಪಮಾನದಲ್ಲಿ ಸಂಗ್ರಹಿಸಿ, ಸುರಕ್ಷಿತವಾಗಿ ಮತ್ತು ಶುಚಿಯಾಗಿ ಗ್ರಾಹಕರಿಗೆ ನೀಡಬೇಕು.

ಆಹಾರ ಸುರಕ್ಷತಾ ಅಧಿಕಾರಿಗಳು ಆಹಾರದ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯದಲ್ಲಿ ಪರೀಕ್ಷಿಸಲು ಕಳುಹಿಸಿ ಕೊಡಲು ವಿಶೇಷ ಆಂದೋಲನವನ್ನು ಕೈಗೊಂಡಿದ್ದು ಆಹಾರೋದ್ಯಮಿಗಳು ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಸಹಕರಿ ಸುವಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಂಕಿತಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News