×
Ad

ಬೆಳ್ಕಳೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧಿಕಾರ ಸ್ವೀಕಾರ

Update: 2025-03-27 18:25 IST

ಉಡುಪಿ: ತೆಂಕನಿಡಿಯೂರು ಗ್ರಾಮದ ಬೆಳ್ಕಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯ ಅಧಿಕಾರ ಹಸ್ತಾಂತರ ಕಾರ್ಯಕ್ರಮವನ್ನು ಇಂದು ನಡೆಯಿತು.

ಗ್ರಾಮ ಆಡಳಿತಾಧಿಕಾರಿ ಪವಿತ್ರ ಅಧಿಕಾರ ಹಸ್ತಾಂತರಿಸಿದರು. ಈ ನೂತನ ವ್ಯವಸ್ಥಾಪನಾ ಸಮಿತಿಯಲ್ಲಿ ಅಧ್ಯಕ್ಷರಾಗಿ ಪ್ರಖ್ಯಾತ್ ಶೆಟ್ಟಿ, ಪ್ರಧಾನ ಅರ್ಚಕರಾಗಿ ಗೋಪಾಲಕೃಷ್ಣ ಭಟ್, ಸದಸ್ಯರಾಗಿ ಭೋಜ ಶೆಟ್ಟಿ, ವೆಂಕಟೇಶ್ ಕುಲಾಲ್, ಪ್ರಭಾಕರ್ ಅಂಚನ್, ಸತೀಶ್, ಮಮತಾ ಶೆಟ್ಟಿ ಹಾಗೂ ಅನುಷಾ ಅಧಿಕಾರ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು, ಉಪ್ಪೂರು ಶ್ರೀಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪ್ರಶಾಂತ್ ಸುವರ್ಣ, ತೆಂಕನಿಡಿಯೂರು ಗ್ರಾಪಂ ಅಧ್ಯಕ್ಷೆ ಶೋಭಾ ನಾಯ್ಕ್, ತೆಂಕನಿಡಿ ಯೂರು ಗ್ರಾಪಂ ಸದಸ್ಯರಾದ ಪ್ರಥ್ವಿರಾಜ್ ಶೆಟ್ಟಿ, ಸತೀಶ್ ನಾಯಕ್, ಸುರೇಶ್ ನಾಯಕ್, ಶರತ್ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಉದಯ್, ಉಮೇಶ್ ಪೂಜಾರಿ, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಂಜಯ್ ಆಚಾರ್ಯ, ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸಜ್ಜನ್ ಶೆಟ್ಟಿ, ಶಿರೀಷ್ ಶೆಟ್ಟಿ, ತಕ್ಷಕ್ ಪೈ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News