ಬೈಕ್ ಡಿಕ್ಕಿ: ಪಾದಚಾರಿ ಮೃತ್ಯು
Update: 2026-01-08 21:04 IST
ಪಡುಬಿದ್ರಿ, ಜ.8 ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವಯೋವೃದ್ದರೊಬ್ಬರು ಮೃತಪಟ್ಟ ಘಟನೆ ಬುಧವಾರ ಬೆಳಿಗ್ಗೆ ಉಚ್ಚಿಲ ಬಸ್ಸು ನಿಲ್ದಾಣದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಮೃತರನ್ನು ಪಣಿಯೂರು ಸೆಂಟರ್ ನಿವಾಸಿ ಸದಾಶಿವ ಕೋಟ್ಯಾನ್(65) ಎಂದು ಗುರುತಿಸಲಾಗಿದೆ. ಪಡುಬಿದ್ರಿ ಕಡೆಯಿಂದ ಕಾಪು ಕಡೆಗೆ ಹೋಗುತ್ತಿದ್ದಾಗ ಬೈಕ್, ರಸ್ತೆ ದಾಟುತ್ತಿದ್ದ ಸದಾಶಿವ ಅವರಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅವರು ಉಡುಪಿ ಜಿಲ್ಲಾಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ.
ಮೃತರು ಮೂಳೂರಿನ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದು, ಮನೆಯಿಂದ ಹೊಟೇಲಿಗೆ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.