ಉದ್ಯಾವರ ಸೇತುವೆಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು
Update: 2026-01-02 21:41 IST
ಕಾಪು, ಜ.2: ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66ರ ಸೇತುವೆ ತಡೆಗೋಡೆಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ನಸುಕಿನ ವೇಳೆ 1.50ರ ಸುಮಾರಿಗೆ ನಡೆದಿದೆ.
ಮೃತರನ್ನು ಸುಬ್ರಹ್ಮಣ್ಯದ ಯುವರಾಜ್ ಎಂದು ಗುರುತಿಸಲಾಗಿದೆ. ಇವರು ತನ್ನ ಬೈಕಿನಲ್ಲಿ ಮಂಗಳೂರಿನಿಂದ ಬ್ರಹ್ಮಾವರದಲ್ಲಿ ತನ್ನ ರೂಂಗೆ ಹೊರಟಿದ್ದು, ದಾರಿ ಮಧ್ಯೆ ಬೈಕ್ ಅತಿ ವೇಗ ಹಾಗೂ ಅಜಾಗರೂಕತೆ ಯಿಂದಾಗಿ ನಿಯಂತ್ರಣ ತಪ್ಪಿ ಉದ್ಯಾವರ ಸೇತುವೆಯ ತಡೆಗೋಡೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಸವಾರ ಯುವರಾಜ ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದು ಬಂದಿದೆ. ಮೃತದೇಹವನ್ನು ಉಚ್ಚಿಲದ ಎಸ್‌ಡಿಪಿಐ ಆಂಬುಲೆನ್ಸ್‌ನಲ್ಲಿ ಕೆಎಂ ಸಿರಾಜ್, ಜಲಾಲುದ್ದೀನ್ ಅಜ್ಜರಕಾಡು ಆಸ್ಪತ್ರೆಯ ಶವಗಾರಕ್ಕೆ ರವಾನಿಸಿದರು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.