×
Ad

ಬಿಷಪ್ ಜೆರಾಲ್ಡ್ ಜೀವನ ಇಡೀ ಸಮಾಜಕ್ಕೆ ಮಾದರಿ: ವಂ. ಗಿರೆಲ್ಲಿ

Update: 2025-02-09 22:39 IST

ಉಡುಪಿ: ಕಥೊಲಿಕ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತೀ ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ ಅವರ 75 ವರ್ಷಗಳ ಹುಟ್ಟುಹಬ್ಬ ಹಾಗೂ ಧರ್ಮಾಧ್ಯಕ್ಷ ದೀಕ್ಷೆಯ 25 ವರ್ಷಗಳ ಬೆಳ್ಳಿ ಹಬ್ಬದ ಮಹೋತ್ಸವ ರವಿವಾರ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್‌ನ ತೆರೆದ ಮೈದಾನದಲ್ಲಿ ಜರಗಿತು.

ಸಭಾ ಕಾರ್ಯಕ್ರಮದಲ್ಲಿ ಜಗದ್ಗುರು ಪೋಪ್ ಫ್ರಾನ್ಸಿಸ್ ಅವರ ಭಾರತ ಮತ್ತು ನೇಪಾಳದ ರಾಯಭಾರಿ ಅತೀ ವಂ.ಡಾ.ಲಿಯೊಪೊಲ್ಡೊ ಗಿರೆಲ್ಲಿ ತಮ್ಮ ಆಶೀರ್ವಚನ ಸಂದೇಶದಲ್ಲಿ, ಬಿಷಪ್ ಜೆರಾಲ್ಡ್ ಜೀವನ ಇಡೀ ಸಮಾಜಕ್ಕೆ ಒಂದು ಮಾದರಿಯಾಗಿದ್ದು ಅವರ ಆಧ್ಯಾತ್ಮಿಕ ಜೀವನದ ಮೂಲಕ ತನ್ನ ಪ್ರಜೆಗಳಿಗೆ ಯೇಸು ಕ್ರಿಸ್ತರ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಲು ಸಹಕಾರಿಯಾಗಿದ್ದಾರೆ. ಅವರ ಸೇವಾ ಮನೋಭಾವದ ಕಾರ್ಯವೈಖರಿ ಯಿಂದಾಗಿ ಧರ್ಮಪ್ರಾಂತ್ಯದಲ್ಲಿ ಪಾಲನಾ ಯೋಜನೆಯನ್ನು ಜಾರಿಗೆಗೊಳಿಸಿ ರುವುದು ದೇಶದ ಇತರ ಧರ್ಮಪ್ರಾಂತ್ಯಗಳಿಗೂ ಮಾದರಿಯಾಗಿದೆ ಎಂದರು.

ತಮ್ಮ ಅಭಿನಂದನಾ ಸಂದೇಶ ನೀಡಿದ ಬೆಂಗಳೂರು ಮಹಾ ಧರ್ಮಕ್ಷೇತ್ರದ ಆರ್ಚ್ ಬಿಷಪ್ ಅತಿ ವಂ.ಡಾ.ಪೀಟರ್ ಮಚಾದೊ ಮಾತನಾಡಿ, ಬಿಷಪ್ ಜೆರಾಲ್ಡ್ ಓರ್ವ ಜನ ಸ್ನೇಹಿ ಧರ್ಮಗುರುವಾಗಿದ್ದು ಜನರ ಅಗತ್ಯತೆಗಳನ್ನು ತಿಳಿದು ಅದನ್ನು ಜಾರಿಗೆ ಮಾಡುವ ಉನ್ನತ ಗುಣವನ್ನು ಹೊಂದಿದ್ದಾರೆ. ಜೆರಾಲ್ಡ್ ಅವರು ಸಂಘಟನಾ ಚತುರರಾಗಿದ್ದು ಯಾವುದೇ ಕಾರ್ಯಕ್ರಮವನ್ನು ಮಾಡುವುದಿದ್ದರೆ ಅದನ್ನು ಶಿಸ್ತುಬದ್ಧವಾಗಿ ಮಾಡುವ ಉನ್ನತ ಕಲೆಯುನ್ನು ಹೊಂದಿರುವುದು ಅವರ ವಿಶೇಷಗುಣವಾಗಿದೆ ಎಂದರು.

ಧರ್ಮಪ್ರಾಂತ್ಯದ ಎಲ್ಲಾ ಆಯೋಗಗಳ ವತಿಯಿಂದ ಧರ್ಮಾಧ್ಯಕ್ಷ ಅತಿ ವಂ.ಡಾ.ಜೆರಾಲ್ಡ್ ಲೋಬೊ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿ ಧರ್ಮಾಧ್ಯಕ್ಷರು, ತನಗೆ ನೀಡಿದ ಜೀವನದಲ್ಲಿ ದೇವರು ಮಾಡಿದ ಎಲ್ಲಾ ಉತ್ತಮ ಕಾರ್ಯಗಳಿಗೆ ಕೃತಜ್ಞತಾಪೂರ್ವಕವಾಗಿ ಸ್ಮರಿಸುವುದಾಗಿ ಹೇಳಿದರು. ಧರ್ಮಪ್ರಾಂತ್ಯದ ವತಿಯಿಂದ ಅತೀ ವಂ.ಡಾ.ಲಿಯೊಪೊಲ್ಡೊ ಗಿರೆಲ್ಲಿ ಅವರನ್ನು ಧರ್ಮಾಧ್ಯಕ್ಷರು ಸನ್ಮಾನಿಸಿದರು.

ಬೆಂಗಳೂರಿನ ನಿವೃತ್ತ ಮಹಾ ಧರ್ಮಾಧ್ಯಕ್ಷ ವಂ.ಡಾ.ಬರ್ನಾಡ್ ಮೊರಾಸ್, ಆಗ್ರಾ ಧರ್ಮಪ್ರಾಂತ್ಯದ ನಿವೃತ್ತ ಬಿಷಪ್ ವಂ.ಆಲ್ಬರ್ಟ್ ಡಿಸೋಜ, ಭದ್ರಾವತಿ ಬಿಷಪ್ ಅತಿ ವಂ.ಜೊಸೇಫ್ ಅರುಮಚಾಡತ್, ಬೆಳಗಾವಿ ಧರ್ಮಾಧ್ಯಕ್ಷ ಅತಿ ವಂ.ಡೆರಿಕ್ ಫೆರ್ನಾಂಡಿಸ್, ಬಳ್ಳಾರಿ ಬಿಷಪ್ ಅತಿ ವಂ.ಹೆನ್ರಿ ಡಿಸೋಜ, ಬೆಳ್ತಂಗಡಿ ಬಿಷಪ್ ಅತಿ ವಂ.ಲೊರೆನ್ಸ್ ಮುಕ್ಕುಝಿ, ಚಿಕ್ಕಮಗಳೂರು ಬಿಷಪ್ ಅತಿ ವಂ.ತೋಮಸಪ್ಪಅಂತೋನಿ ಸ್ವಾಮಿ, ಗುಲ್ಬರ್ಗಾ ಬಿಷಪ್ ಅತಿ ವಂ.ರೊಬರ್ಟ್ ಎಂ.ಮಿರಾಂದಾ, ಕಾರವಾರ ಬಿಷಪ್ ಅತಿ ವಂ.ದುಮಿಂಗ್ ಡಯಾಸ್, ಮಂಗಳೂರಿನ ನಿವೃತ್ತ ಬಿಷಪ್ ಅತಿ ವಂ.ಅಲೋಶಿಯಸ್ ಪಾವ್ಲ್ ಡಿಸೋಜ, ಪುತ್ತೂರು ಬಿಷಪ್ ವಂ.ಗೀವರ್ಗಿಸ್ ಮಾರ್ ಮಕಾರಿಯೋಸ್ ಕಲಾಯಿಲ್, ಶಿವಮೊಗ್ಗ ಬಿಷಪ್ ವಂ.ಡಾ.ಪ್ರಾನ್ಸಿಸ್ ಸೆರಾವೊ, ಲಕ್ನೊ ಬಿಷಪ್ ವಂ.ಜೆರಾಲ್ಡ್ ಜೋನ್ ಮಥಾಯಸ್, ಬರಾಯಿಪುರ್ ನಿವೃತ್ತ ಬಿಷಪ್ ವಂ.ಸಾಲ್ವದೊರ್ ಲೋಬೊ, ಅಲಹಾಬಾದ್ ಬಿಷಪ್ ವಂ.ಲೂಯಿಸ್ ಮಸ್ಕರೇನ್ಹಸ್, ಬೆಂಗಳೂರಿನ ಸಹಾಯಕ ಧರ್ಮಾಧ್ಯಕ್ಷ ಅತಿ ವಂ.ಜೊಸೇಫ್ ಸುಶಿನಾಥನ್, ಮೈಸೂರು ಧರ್ಮಪ್ರಾಂತ್ಯದ ಶ್ರೇಷ್ಠಗುರು ಮೊನ್ಸಿಂಜ್ಞೊರ್ ಆಲ್ಫ್ರೇಡ್ ಮೆಂಡೊನ್ಸಾ, ಮಂಗಳೂರಿನ ಶ್ರೇಷ್ಠಗುರು ಮೊನ್ಸಿಂಜ್ಞೊರ್ ಮ್ಯಾಕ್ಷಿಮ್ ನೊರೊನ್ಹಾ, ಕುಲಪತಿಗಳಾದ ವಂ.ಡಾ.ರೋಶನ್ ಡಿಸೋಜ, ವಂ.ಜೊರ್ಜ್ ವಿಕ್ಟರ್ ಡಿಸೋಜ, ಉಡುಪಿ ಧರ್ಮ ಪ್ರಾಂತ್ಯದ ಸಲಹೆಗಾರರಾದ ವಂ.ಚಾರ್ಲ್ಸ್ ಮಿನೇಜಸ್, ವಂ.ಆಲ್ಬನ್ ಡಿಸೋಜ, ವಂ.ರೆಜಿನಾಲ್ಡ್ ಪಿಂಟೊ, ವಂ.ಜೋರ್ಜ್ ಡಿಸೋಜ, ವಂ.ಡಾ.ಲೆಸ್ಲಿ ಡಿಸೋಜ, ವಂ.ಅನಿಲ್ ಡಿಸೋಜ, ವಂ.ಪಾವ್ಲ್ ರೇಗೊ, ವಂ.ಡೆನಿಸ್ ಡೆಸಾ ಉಪಸ್ಥಿತರಿದ್ದರು.

ಕಾರ್ಯಕ್ರಮದ ಸಂಚಾಲಕ, ಧರ್ಮಪ್ರಾಂತ್ಯದ ಶ್ರೇಷ್ಠ ಗುರು ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್ ಸ್ವಾಗತಿಸಿದರು. ಧರ್ಮಪ್ರಾಂತ್ಯದ ಪಾಲನಾ ಮಂಡಳಿಯ ಕಾರ್ಯದರ್ಶಿ ಲೆಸ್ಲಿ ಅರೋಝಾ ವಂದಿಸಿದರು. ಧರ್ಮಪ್ರಾಂತ್ಯದ ಹಣಕಾಸು ಸಮಿತಿ ಸದಸ್ಯ ಪ್ರಿತೇಶ್ ಡೆಸಾ ಹಾಗೂ ಜೆನಿಶಾ ಕೆಮ್ಮಣ್ಣು ಕಾರ್ಯಕ್ರಮ ನಿರೂಪಿಸಿದರು.

ಆರಂಭದಲ್ಲಿ ಅತೀ ವಂ.ಡಾ|ಜೆರಾಲ್ಡ್ ಐಸಾಕ್ ಲೋಬೊ ಎಲ್ಲಾ ಧರ್ಮಾಧ್ಯಕ್ಷರು, ಧರ್ಮಗುರುಗಳು ಹಾಗೂ ಭಕ್ತಾದಿಗಳೊಂದಿಗೆ ಕೃತಜ್ಞಾತಾ ಬಲಿಪೂಜೆ ನೆರವೇರಿಸಿದರು. ಶಿವಮೊಗ್ಗ ಧರ್ಮಾಧ್ಯಕ್ಷ ಅತಿ ವಂ.ಡಾ.ಪ್ರಾನ್ಸಿಸ್ ಸೆರಾವೊ ಪ್ರವಚನ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News