×
Ad

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಅಗ್ರಹಿಸಿ ಬಿಜೆಪಿ ಧರಣಿ

Update: 2024-08-19 20:24 IST

ಉಡುಪಿ, ಆ.19: ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಅಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಸೋಮವಾರ ಉಡುಪಿ ಜಿಲ್ಲಾ ಬಿಜೆಪಿ ಕಚೇರಿ ಬಳಿ ಧರಣಿ ನಡೆಸಲಾಯಿತು.

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ನೇತೃತ್ವದಲ್ಲಿ ಧರಣಿ ನಡೆಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಬಳಿಕ ರಾಷ್ಟ್ರೀಯ ಹೆದ್ದಾರಿ 169 ಎಯಲ್ಲಿ ವಾಹನ ತಡೆದು ಆಕ್ರೋಶ ವ್ಯಕ್ತಪಡಿಸಿದರು.

ಮಂಗಳೂರು ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ಮುಖಂಡರಾದ ಮಟ್ಟಾರು ರತ್ನಾಕರ್ ಹೆಗ್ಡೆ, ರೇಶ್ಮಾ ಉದಯ ಶೆಟ್ಟಿ, ವೀಣಾ ಶೆಟ್ಟಿ, ಗೀತಾಂಜಲಿ ಸುವರ್ಣ, ಶ್ಯಾಮಲಾ ಕುಂದರ್, ಸಂಧ್ಯಾ ರಮೇಶ್, ಪೃಥ್ವಿರಾಜ್ ಹೆಗ್ಡೆ, ಶಿಲ್ಪಾ ಸುವರ್ಣ, ವಿಜಯ ಕುಮಾರ್ ಕೊಡವೂರು, ಶಿವಕುಮಾರ್ ಅಂಬಲಪಾಡಿ, ಶ್ರೀಶ ನಾಯಕ್ ಪೆರ್ಣಂಕಿಲ ಮೊದಲಾದವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News