×
Ad

ಬಿಜೆಪಿ ಜಿಲ್ಲಾಧ್ಯಕ್ಷರ ಹೇಳಿಕೆ ಅವಿವೇಕ, ಬಾಲಿಷ: ಅಶೋಕ್ ಕೊಡವೂರು

Update: 2023-07-31 20:26 IST

ಅಶೋಕ್ ಕುಮಾರ್ ಕೊಡವೂರು

ಉಡುಪಿ: ಉಡುಪಿಯ ವಿಡಿಯೋ ಚಿತ್ರೀಕರಣ ಪ್ರಕರಣವನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಮುಚ್ಚಿ ಹಾಕಲು ಪ್ರಯತ್ನಿಸುತ್ತಿದೆ ಎಂಬ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರ ಆರೋಪ ಬಾಲಿಷ ಹಾಗೂ ಅವಿವೇಕದಿಂದ ಕೂಡಿದೆ ಎಂದು ಕಾಂರೆಸ್ ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಟೀಕಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಇಲಾಖೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಲಿದೆ. ತಪ್ಪಿಸಸ್ಥರಿಗೆ ತಕ್ಕ ಶಿಕ್ಷೆ ಆಗಲಿದೆ. ಕಾನೂನು ಅದರದೆ ಆದ ಕ್ರಮ ಕೈಗೊಳ್ಳಲಿದೆ. ಹೀಗಿರುವಾಗ ಕಾಂಗ್ರೆಸ್ ಪಕ್ಷ ಪ್ರಕರಣದಲ್ಲಿ ಮೂಗು ತೂರಿಸುವ ಯಾವುದೇ ಪ್ರಮೇಯವಿಲ್ಲ. ಜಿಲ್ಲೆಯ ವಿದ್ಯಾರ್ಥಿನಿಯರ ಬಗ್ಗೆ ಕಾಳಜಿ ತೋರಿಸಿರುವ ಬಿಜೆಪಿ ಮಣಿಪುರದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ಅಮಾನವೀಯ ದೌರ್ಜನ್ಯದ ಬಗ್ಗೆ ಸಾಕ್ಷಿ ಸಮೇತ ಬಿಂಬಿತವಾದರೂ ಮೌನವಾಗಿರುವುದು ಸಂಶಯಕ್ಕೆ ಎಡೆಮಾಡಿದೆ. ಬಿಜೆಪಿಯ ಈ ನಿಲುವನ್ನು ನಾವು ಖಂಡಿಸುತ್ತೇವೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News