×
Ad

ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರ ಖಂಡಿಸಿ ಬಿಜೆಪಿ ಪ್ರತಿಭಟನೆ

Update: 2023-10-16 20:56 IST

ಉಡುಪಿ: ಬೆಂಗಳೂರಿನಲ್ಲಿ ನಡೆದ ಐಟಿ ದಾಳಿಯ ವೇಳೆ ಕಾಂಗ್ರೆಸ್ ಪಕ್ಷದ ಮಾಜಿ ಕಾರ್ಪೊರೇಟರ್ ಮನೆಯಲ್ಲಿ ಅಕ್ರಮ ಹಣ ಪತ್ತೆಯಾಗಿವುದನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಮಾಜಿ ಶಾಸಕ ಕೆ.ರಘುಪತಿ ಭಟ್ ಮಾತನಾಡಿ, ಪಂಚರಾಜ್ಯಗಳ ಚುನಾ ವಣೆಗೆ ಕಾಂಗ್ರೆಸ್ ಸರಕಾರ ಈ ಅಕ್ರಮ ಹಣ ಸಂಗ್ರಹಿಸುತ್ತಿದೆ ಎಂಬ ಮಾಹಿತಿಯೂ ಮಾಧ್ಯಮಗಳು ಬಿತ್ತರಿಸಿವೆ. ತೆಲಂಗಾಣದ ಚುನಾವಣೆಗೆ ಈ ಹಣ ಬಳಸಲು ಉದ್ದೇಶಿಸಲಾಗಿತ್ತು ಎಂಬ ಸುದ್ದಿಗೆ ಕಾಂಗ್ರೆಸ್ ಕೂಡಲೇ ಸ್ಪಷ್ಟೀಕರಣ ನೀಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮುಖಂಡರಾದ ಉದಯ ಕುಮಾರ್ ಶೆಟ್ಟಿ, ರವಿ ಅಮೀನ್, ಮಟ್ಟಾರು ರತ್ನಾಕರ ಹೆಗ್ಡೆ, ಮಂಜುನಾಥ್ ಮಣಿಪಾಲ, ದಾವೂದ್ ಅಬೂಬಕ್ಕರ್, ಅಂಡಾರು ದೇವಿಪ್ರಸಾದ್ ಶೆಟ್ಟಿ, ಸತ್ಯಾನಂದ ನಾಯಕ್, ಸದಾನಂದ ಉಪ್ಪಿನಕುದ್ರು, ಶಿವಕುಮಾರ್ ಅಂಬಲಪಾಡಿ ಮೊದಲಾದವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News