ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ
ಉಡುಪಿ, ಡಿ.23: ರೆಸಾರ್ಟ್‌ನಲ್ಲಿ ಅಕ್ರಮವಾಗಿ ವಿದೇಶಿ ವಲಸರಿಗೆ ಕೆಲಸ ನೀಡಿರುವ ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಮಂಗಳವಾರ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಅವರಿಗೆ ಸೇರಿದ ಹನೆಹಳ್ಳಿ ಗ್ರಾಮದ ಕೂರಾಡಿ ಸಂಕಮ್ಮ ತಾಯಿ ರೆಸಾ ಅಕ್ರಮವಾಗಿ ದೇಶದೊಳಗೆ ಬಂದ ವಿದೇಶಿಗರನ್ನು ಸೇರಿಸಿ ಅವರಿಗೆ ಕಾನೂನು ಬಾಹಿರವಾಗಿ ಆಶ್ರಯ ಮತ್ತು ಉದ್ಯೋಗ ನೀಡುತ್ತಿರುವುದು ಹಲವು ಮೂಲಗಳಿಂದ ಕಂಡು ಬಂದಿದ್ದು ಈ ವಿಷಯವು ಅತ್ಯಂತ ಗಂಭೀರವಾಗಿದೆ. ಇದು ದೇಶದ ಭದ್ರತೆಗೆ ಅಪಾಯ ತರುವ ಸಾಧ್ಯತೆಗಳಿದ್ದು ಅಕ್ರಮ ನುಸುಳು ಕೋರರಾದ ವಿದೇಶಿಗರ ಹಾಗೂ ಅವರಿಗೆ ಆಶ್ರಯ ಕಲ್ಪಿಸಿ ಉದ್ಯೋಗ ನೀಡುತ್ತಿರುವುದು ಅಕ್ಷಮ್ಯ ಅಪರಾಧವಾಗಿದೆ.
ಇಂತಹ ದುಷ್ಕೃತ್ಯವನ್ನು ಮಾಡುತ್ತಿರುವ ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ತನಿಖೆ ನಡೆಸಿ ಯಾವುದೇ ಒತ್ತಡಕ್ಕೆ ಮಣಿಯದೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರಿಗೆ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್, ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಚಂದ್ರಮೋಹನ್, ಸುಕೇಶ್ ಕುಂದರ್, ಕಾಂಗ್ರೆಸ್ ಪಕ್ಷದ ನಾಯಕರಾದ ಮಹಾಬಲ ಕುಂದರ್, ಮೀನಾಕ್ಷಿ ಮಾಧವ ಬನ್ನಂಜೆ, ಮ್ಯಾಕ್ಸಿಮ್ ಡಿಸೋಜ, ಹಸನ್ ಸಾಹೇಬ್, ಗಣೇಶ್ ನೆರ್ಗಿ, ನವೀನ್ ಶೆಟ್ಟಿ, ಲತಾ ಆನಂದ್ ಶೇರಿಗಾರ್, ಸುರೇಶ್ ಶೆಟ್ಟಿ ಬನ್ನಂಜೆ, ಸದಾನಂದ್ ಕುಲಾಲ್, ಮೊಹಮ್ಮದ್, ಶರತ್ ಶೆಟ್ಟಿ, ದಯಾನಂದ್, ಜೋಸ್ಸಿ ಪಿಂಟೋ, ಮನೋಜ್ ಕರ್ಕೇರ, ಸತೀಶ್ ಪುತ್ರನ್, ಹಮ್ಮದ್, ಕಿಶೋರ್, ಸಂಜಯ್ ಆಚಾರ್ಯ ಹಾಗೂ ಇನ್ನಿತರರು ಉಪಸ್ಥಿತರಿದ್ದರು.