×
Ad

ಬಿಜೆಪಿಯ ಬಿ.ಎಲ್‌. ಸಂತೋಷ್‌ ವಿರುದ್ಧ ಅವಹೇಳನ ಆರೋಪ: ತಿಮರೋಡಿ ವಿರುದ್ಧ ಪ್ರಕರಣ ದಾಖಲು

Update: 2025-08-19 12:25 IST

ಉಡುಪಿ: ದ್ವೇಷ ಪ್ರಚಾರ ಪ್ರಕರಣಕ್ಕೆ ಸಂಬಂಧಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಹಿತ ಇಬ್ಬರ ವಿರುದ್ದ ವಿವಿಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹೇಶ ಶೆಟ್ಟಿ ತಿಮರೋಡಿಯು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್‌ ಅವರ ಬಗ್ಗೆ ಅವಹೇಳನಕಾರಿಯಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ ತೇಜೋವಧೆ ಮಾಡಿದ್ದಲ್ಲದೇ, ಬೇರೆ ಬೇರೆ ಧರ್ಮಗಳ ಹಾಗೂ ಸಮುದಾಯದ ನಡುವೆ ವೈಮನಸ್ಸಿನ ದ್ವೇ಼ಷ ಭಾವನೆಯನ್ನುಂಟು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಉಡುಪಿ ಗ್ರಾಮಾಂತರ ಬಿಜಿಪಿಯ ಮಂಡಲಾಧ್ಯಕ್ಷ ರಾಜೀವ ಕುಲಾಲ್ ನೀಡಿದ ದೂರಿನನ್ವಯ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಅದೇ ರೀತಿ ಆ.9ರಂದು ಕೋಟ ವಸಂತ ಗಿಳಿಯಾರ್‌ ಫೇಸ್‌ ಬುಕ್‌ ಖಾತೆಯಲ್ಲಿ ಧರ್ಮಸ್ಥಳ ಕ್ಷೇತ್ರದ ಮ್ಯಾಪ್‌ನ್ನು ಆಳವಡಿಸಿ ಅಲ್ಲಿರುವ ದೇವಸ್ಥಾನ ಮತ್ತು ಮಸೀದಿಗಳ ಬಗ್ಗೆ ಒಂದು ಪೋಸ್ಟ್ ಹಾಕಿದ್ದು, ಧರ್ಮಗಳ ಮಧ್ಯೆ ಗಲಭೆ ಸೃಷ್ಠಿಸುವಂಥ ಹಾಗೂ ಧಾರ್ಮಿಕ ಸಂಸ್ಥೆಗಳ ಮೇಲೆ ದಾಳಿಗೆ ಪ್ರಚೋದಿಸುವಂತಹ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿರುವುದು ಮತ್ತು ಸಾಮಾಜಿಕ ಜಾಲತಾಣದಲ್ಲಿ ಕೆಂಪು ಮತ್ತು ನೀಲಿ ಬಣ್ಣದಲ್ಲಿ ಗುರುತು ಮಾಡಿದ ನಕ್ಷೆಯನ್ನು ಕೂಡ ಪ್ರಸಾರ ಮಾಡಿರುವ ಕುರಿತು ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿತ್ತು.

 ಇದೇ ಪೇಸ್‌ಬುಕ್‌ ಪೋಸ್ಟನ್ನು ಕೋಟ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಶರತ್ ಶೆಟ್ಟಿ, ವಡ್ಡರ್ಸೆ ಎಂಬವರು ರೀ ಪೊಸ್ಟ್‌ ಮಾಡಿದ್ದು, ಈ ಬಗ್ಗೆ ಕೋಟ ಪೊಲೀಸ್‌ ಠಾಣೆಯಲ್ಲಿ ಜೀರೋ ಅಪರಾಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News