ಕೋಡಿ ಬ್ಯಾರಿಸ್ ಕಾಲೇಜಿನಲ್ಲಿ ರಕ್ತದಾನ ಶಿಬಿರ
ಕುಂದಾಪುರ: ಕೋಡಿ ಬ್ಯಾರಿಸ್ ಪ್ರಥಮ ದರ್ಜೆ ಕಾಲೇಜಿನ ಯೂತ್ ರೆಡ್‌ಕ್ರಾಸ್ ಘಟಕದ ವತಿಯಿಂದ ರಕ್ತದಾನ ಶಿಬಿರವನ್ನು ಬುಧವಾರ ಕಾಲೇಜಿನಲ್ಲಿ ನಡೆಸಲಾಯಿತು.
ಕುಂದಾಪುರ ರೆಡ್‌ಕ್ರಾಸ್ ಘಟಕದ ಅಧ್ಯಕ್ಷ ಜಯಕರ್ ಶೆಟ್ಟಿ ರಕ್ತದಾನದ ಪ್ರಯೋಜನಗಳ ಕುರಿತು ಮಾಹಿತಿ ನೀಡಿದರು. ರಕ್ತದಾನ ಶಿಬಿರದಲ್ಲಿ ವಿದ್ಯಾರ್ಥಿ ಗಳು ಸೇರಿದಂತೆ ಬೋಧಕ ಹಾಗೂ ಬೋಧಕೇತರರು ಸ್ವಪ್ರೇರಣೆಯಿಂದ ರಕ್ತದಾನ ಮಾಡಿದರು.
ಶಿಬಿರದಲ್ಲಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಜಿ ಕೆ.ಎಂ. ಅಬ್ದುಲ್ ರೆಹಮಾನ್, ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ವಿಶ್ವಸ್ಥ ಮಂಡಳಿಯ ಸದಸ್ಯ ಡಾ.ಆಸಿಫ್ ಬ್ಯಾರಿ, ಬ್ಯಾರಿಸ್ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಶಮೀರ್, ಕುಂದಾಪುರ ರೆಡ್‌ಕ್ರಾಸ್ ಘಟಕದ ಕೋಶಾಧಿ ಕಾರಿ ಶಿವರಾಮ ಶೆಟ್ಟಿ, ಕುಂದಾಪುರ ರೆಡ್‌ಕ್ರಾಸ್ ಸಮಿತಿಯ ಸದಸ್ಯ ಸದಾನಂದ ಶೆಟ್ಟಿ, ಬ್ಯಾರಿಸ್ ಪ್ರಥಮ ದರ್ಜೆ ಕಾಲೇಜಿನ ಯೂತ್ ರೆಡ್‌ಕ್ರಾಸ್ ಘಟಕದ ಸಂಯೋಜಕ ಅಜಿತ್ ಕುಮಾರ್, ವಿದ್ಯಾರ್ಥಿ ಪ್ರತಿನಿಧಿ ಮುಹಮದ್ ರಿಜ್ವಾನ್ ಉಪಸ್ಥಿತರಿದ್ದರು.