ಟಿ.ಎಂ.ಎ.ಪೈ.ರೋಟರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ
Update: 2025-09-19 11:39 IST
ಕಾರ್ಕಳ : ಟಿ.ಎಂ.ಎ.ಪೈ.ರೋಟರಿ ಆಸ್ಪತ್ರೆ ಕಾರ್ಕಳ ಮತ್ತು ರೋಟರಿ ಕ್ಲಬ್ ಕಾರ್ಕಳ ಇವರ ಸಹಭಾಗಿತ್ವದಲ್ಲಿ ಮಾಹೆಯ ಚಾನ್ಸಲರ್ ಡಾ, ರಾಮದಾಸ್ ಪೈ ಯವರ 90ನೇ ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ ಶಿಬಿರವು ಕಾರ್ಕಳ ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆಯಲ್ಲಿ ಜರುಗಿತು.
ಶಿಬಿರವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿ ಮಾತನಾಡಿದ ಕ್ಲಬ್ಬಿನ ಮೇಜರ್ ಡೋನರ್ ತುಕಾರಾಮ ನಾಯಕ್ ರವರು ಯುವ ಜನರಲ್ಲಿ ರಕ್ತದಾನದ ಬಗ್ಗೆ ಜಾಗೃತಿ ಮೂಡುತ್ತಿರುವುದು ಅಭಿನಂದನೀಯ ಎಂದರು.
ಅಧ್ಯಕ್ಷತೆಯನ್ನು ವಹಿಸಿದ್ದ ಕ್ಲಬ್ಬಿನ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಸ್ವಾಗತಿಸಿದರು. ರೋಟರಿಯ ಜಿಲ್ಲಾ ಮಾಜಿ ಗವರ್ನರ್ ಡಾ.ಭರತೇಶ್ ಆಧಿರಾಜ್, ಆಸ್ಪತ್ರೆಯ ಮುಖ್ಯಸ್ಥರಾದ ಡಾ.ಕೀರ್ತಿನಾಥ್ ಬಳ್ಳಾಲ್, ಡಾ.ಆಶಾ ಹೆಗ್ಡೆ ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು.
ಕ್ಲಬ್ಬಿನ ಸಮುದಾಯ ಸೇವಾ ಚೇರ್ಮನ್ ವಸಂತ್ ಎಂ. ಕಾರ್ಯಕ್ರಮ ನಿರೂಪಿಸಿದರು.ಕಾರ್ಯದರ್ಶಿ ಚೇತನ್ ನಾಯಕ್ ವಂದಿಸಿದರು.