ಬ್ರಹ್ಮಾವರ | ನ.23ರಂದು ಶೋಷಿತ ಜನ ಜಾಗೃತಿ ಸಮಾವೇಶ
Update: 2025-11-16 18:18 IST
ಬ್ರಹ್ಮಾವರ, ನ.16: ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ಬ್ರಹ್ಮಾವರ ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ‘ಶೋಷಿತ ಜನ ಜಾಗೃತಿ ಸಮಾವೇಶ’ವನ್ನು ಬ್ರಹ್ಮಾವರ ಹೊಟೇಲ್ ಆಶ್ರಯ ಸಭಾಭವನದಲ್ಲಿ ನ.23ರಂದು ಬೆಳಗ್ಗೆ 10ಗಂಟೆಗೆ ನಡೆಯಲಿದೆ.
ಕಾರ್ಯಕ್ರಮವನ್ನು ದಸಂಸ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್ ಉದ್ಘಾಟಿಸಲಿರುವರು. ಅಧ್ಯಕ್ಷತೆಯನ್ನು ಜಿಲ್ಲಾ ಪ್ರಧಾನ ಸಂಚಾಲಕ ಟಿ.ಮಂಜುನಾಥ ಗಿಳಿಯಾರು ವಹಿಸಲಿರುವರು. ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ ನೂತನ ಪದಾಧಿಕಾರಿಗಳ ಪ್ರಮಾಣ ವಚನ ನೆರವೇರಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.